ಗುರುವಾರ , ಆಗಸ್ಟ್ 5, 2021
22 °C

ಸಿಬಿಎಸ್‌ಇ, ಐಸಿಎಸ್‌ಇ ಬಾಕಿ ಪರೀಕ್ಷೆ ರದ್ದು ಮಾಡಿ: ಪಾಲಕರ ಟ್ವಿಟರ್‌ ಆಭಿಯಾನ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಜುಲೈ 1ರಿಂದ ನಿಗದಿಯಾಗಿರುವ ಸಿಬಿಎಸ್‌ಇ ಮತ್ತು ಐಸಿಎಸ್‌ಇಯ ಬಾಕಿ ಇರುವ 10 ಮತ್ತು 12ನೇ ತರಗತಿಗಳ ಬೋರ್ಡ್‌ ಪರೀಕ್ಷೆಗಳನ್ನು ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ, ರದ್ದುಗೊಳಿಸಬೇಕೆಂದು ಹೆಚ್ಚಿನ ಪೋಷಕರು ಆಗ್ರಹಿಸಿದ್ದಾರೆ.

ಈಗಾಗಲೇ ನಡೆಸಿರುವ ಪರೀಕ್ಷೆಗಳು ಹಾಗೂ ಆಂತರಿಕ ಮೌಲ್ಯಮಾಪನ ಆಧರಿಸಿ ಫಲಿತಾಂಶ ಪ್ರಕಟಿಸಬೇಕು ಎಂದೂ ಒತ್ತಾಯಿಸಿದ್ದಾರೆ.

ಪರೀಕ್ಷೆಗಳನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿರುವ ಹಲವು ಪಾಲಕರು #studentlivesmatter, #livesoverexams, #cancelboardexams ಎಂಬ ಹ್ಯಾಷ್‌ಟ್ಯಾಗ್‌ ಅಭಿಯಾನವನ್ನೂ ಆರಂಭಿಸಿದ್ದಾರೆ.

ಪರೀಕ್ಷೆಗಳನ್ನು ರದ್ದುಗೊಳಿಸಬೇಕೆಂದು ಕೋರಿ ನಾಲ್ವರು ಪೋಷಕರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

‘ಮಕ್ಕಳ ಸುರಕ್ಷತೆಯ ಬಗ್ಗೆ ಯಾರು ಭರವಸೆ ನೀಡುತ್ತಾರೆ?. ಒಬ್ಬ ವಿದ್ಯಾರ್ಥಿಗೆ ಅಥವಾ ಪರೀಕ್ಷಾ ಮೇಲ್ವಿಚಾರಕರಿಗೆ ಸೋಂಕು ತಗುಲಿದರೆ ಅದು ತರಗತಿ ಕೋಣೆಯಲ್ಲಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಹರಡಬಹುದು. ನಾಲ್ಕು ಗಂಟೆಗಳ ಕಾಲ ಒಂದೇ ಕೋಣೆಯಲ್ಲಿರುವುದರಿಂದ ಸೋಂಕು ಹರಡುವ ಅಪಾಯ ಹೆಚ್ಚು’ ಎಂದು ಪಾಲಕರೊಬ್ಬರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು