ಶನಿವಾರ, ಫೆಬ್ರವರಿ 22, 2020
19 °C
ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭ

ಪರೀಕ್ಷಾ ಪೆ ಚರ್ಚಾ: ಇಂದು ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: 10ನೇ ತರಗತಿ ಹಾಗೂ ದ್ವಿತೀಯ ಪಿಯು ಪರೀಕ್ಷೆ ಸಮೀಪಿಸುತ್ತಿರುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ‘ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮ ನಡೆಸಲಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರೊಂದಿಗೆ ಸಂವಾದ ನಡೆಸಲಿದ್ದಾರೆ.

ಉಪಕಾರ ಸ್ಮರಣೆ ದೊಡ್ಡದು, ನಿಮ್ಮ ಮಹತ್ವಾಕಾಂಕ್ಷೆ ಮೇಲೆ ನಿಮ್ಮ ಭವಿಷ್ಯ ನಿರ್ಧಾರ, ಪರೀಕ್ಷೆಗಳನ್ನು ಪರೀಕ್ಷಿಸಿ ಮುಂತಾದ ವಿಷಯಗಳ ಕುರಿತು ಪ್ರಬಂಧ ಬರೆಯುವಂತೆ ಆಹ್ವಾನಿಸಲಾಗಿತ್ತು.

ಅಂತಿಮವಾಗಿ ಆಯ್ಕೆಯಾದ ಪ್ರಬಂಧಗಳನ್ನು ಬರೆದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪ್ರಧಾನಿ ಅವರಿಗೆ ಪ್ರಶ್ನೆಗಳನ್ನು ಕೇಳುವ ಅವಕಾಶ ಪಡೆಯಲಿದ್ದಾರೆ. ಸಂವಾದ ಬೆಳಗ್ಗೆ 11ಕ್ಕೆ ಪ್ರಾರಂಭವಾಗಲಿದ್ದು, ಯೂಟ್ಯೂಬ್‌ನಲ್ಲಿ ಪ್ರಸಾರವಾಗಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು