ಶನಿವಾರ, ಆಗಸ್ಟ್ 24, 2019
27 °C

ಸುಪ್ರೀಂ ನ್ಯಾಯಮೂರ್ತಿಗಳ ಸಂಖ್ಯೆ ಹೆಚ್ಚಳಕ್ಕೆ ಸಂಸತ್ ಒಪ್ಪಿಗೆ

Published:
Updated:

ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆಯನ್ನು 30ರಿಂದ 33ಕ್ಕೆ ಏರಿಕೆ ಮಾಡುವ ಮಸೂದೆ ಬುಧವಾರ ಸಂಸತ್ತಿನಲ್ಲಿ ಅಂಗೀಕಾರವಾಗಿದೆ.

ವಿಚಾರಣೆ ಬಾಕಿ ಇರುವ ಪ್ರಕರಣಗಳ ಸಂಖ್ಯೆ ಕಡಿಮೆ ಮಾಡುವುದು ಇದರ ಉದ್ದೇಶ. ‘ಸುಪ್ರೀಂ ಕೋರ್ಟ್ (ನ್ಯಾಯಮೂರ್ತಿಗಳ ಸಂಖ್ಯೆ) ತಿದ್ದುಪಡಿ ಮಸೂದೆ 2019’ ಅನ್ನು ಮಂಡಿಸಿದ ಕಾನೂನು ಸಚಿವ ರವಿಶಂಕರ್ ಪ್ರಸಾದ್, ‘ಸದನ ಈ ಮಸೂದೆ ಪರಿಗಣಿಸಬೇಕೆಂದು ಕೋರುತ್ತೇನೆ’ ಎಂದರು.

ಯಾವುದೇ ಚರ್ಚೆ ಇಲ್ಲದೆ ಮಸೂದೆಯನ್ನು ಅಂಗೀಕರಿಸಲಾಗಿದೆ. ಲೋಕಸಭೆಯಲ್ಲಿ ಸೋಮವಾರವಷ್ಟೆ ಈ ಮಸೂದೆ ಅಂಗೀಕಾರಗೊಂಡಿತ್ತು.

Post Comments (+)