ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸತ್‌ ಕಲಾಪ ನುಂಗಿದ ಹಿಂಸಾಚಾರ

Last Updated 2 ಮಾರ್ಚ್ 2020, 17:54 IST
ಅಕ್ಷರ ಗಾತ್ರ

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ಎರಡನೇ ಭಾಗದ ಕಲಾಪ ಸೋಮವಾರ ಆರಂಭವಾಯಿತು. ಆದರೆ, ಉಭಯ ಸದನಗಳ ಕಲಾಪವನ್ನು ದೆಹಲಿಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರವು ಬಲಿ ಪಡೆದುಕೊಂಡಿತು.

ಲೋಕಸಭೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಸದಸ್ಯರ ನಡುವೆ ಮಾರಾಮಾರಿ ನಡೆಯುವಷ್ಟು ಪರಿಸ್ಥಿತಿ ವಿಕೋಪಕ್ಕೆ ಹೋಯಿತು. ‘ದೆಹಲಿ ಗಲಭೆಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಗೃಹ ಸಚಿವ ಅಮಿತ್‌ ಶಾ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿ ವಿರೋಧ ಪಕ್ಷಗಳ ಸದಸ್ಯರು ಸ್ಪೀಕರ್‌ ಪೀಠದ ಮುಂದೆ ಜಮಾಯಿಸಿ ಘೋಷಣೆ ಕೂಗಿದರು.

ಮಧ್ಯಾಹ್ನದ ನಂತರ ಲೋಕಸಭೆಯಲ್ಲಿ ಬಿಜೆಪಿಯ ಸದಸ್ಯ ಸಂಜಯ್‌ ಜೈಸ್ವಾಲ್ ಮಾತನಾಡುತ್ತಿದ್ದಾಗ ಕಾಂಗ್ರೆಸ್ ಸದಸ್ಯರು ಅವರ ಮುಂದೆ ಘೋಷಣಾ ಫಲಕ ಹಿಡಿದರು. ಇದು ಬಿಜೆಪಿ ಮತ್ತು ಕಾಂಗ್ರೆಸ್‌ ಸದಸ್ಯರ ನಡುವೆ ನೂಕಾಟಕ್ಕೆ ಕಾರಣವಾಯಿತು.

ರಾಜ್ಯಸಭೆಯಲ್ಲಿಯೂ ವಿರೋಧ ಪಕ್ಷಗಳ ಸದಸ್ಯರು ತೀವ್ರ ಪ್ರತಿಭಟನೆ ನಡೆಸಿದರು.

ಸಂಸತ್‌ ಭವನದ ಆವರಣದಲ್ಲಿ ಕಾಂಗ್ರೆಸ್‌, ಟಿಎಂಸಿ ಮತ್ತು ಎಎಪಿಯ ಸಂಸದರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT