ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರ್ರೀಕರ್‌ ಆರೋಗ್ಯದಲ್ಲಿ ಚೇತರಿಕೆ

Last Updated 15 ಅಕ್ಟೋಬರ್ 2018, 14:16 IST
ಅಕ್ಷರ ಗಾತ್ರ

ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್‌ ಪರ್ರೀಕರ್‌ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದೆ. ಆದರೆ, ಅವರಿಗೆ ಇನ್ನು ಒಂದು ವಾರ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ.

ಮೇಧೋಜೀರಕ ಗ್ರಂಥಿ ಸಮಸ್ಯೆಯಿಂದಾಗಿ ದೆಹಲಿಯ ಏಮ್ಸ್‌ನಲ್ಲಿ ಚಕಿತ್ಸೆ ಪಡೆಯುತ್ತಿದ್ದ ಅವರು ಭಾನುವಾರವಷ್ಟೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

ಗೋವಾ ರಾಜ್ಯಕ್ಕೆ ವಾಪಸಾದ ನಂತರ ಡೊನಾ ಪೌಲಾ ಬಳಿ ಇರುವ ಅವರ ಖಾಸಗಿ ನಿವಾಸದಲ್ಲೇ ಅವರಿಗೆ ಗೋವಾ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಿಂದ ವೈದ್ಯರ ತಂಡ ನಿಯೋಜಿಸಿ, ಅಗತ್ಯ ವೈದ್ಯಕೀಯ ವ್ಯವಸ್ಥೆ ಮಾಡಲಾಗಿದೆ.

‘ಪರ್ರೀಕರ್‌ ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದೆ. ಬೆಳಿಗ್ಗೆ ಕುಟುಂಬದ ಸದಸ್ಯರೊಂದಿಗೆ ಅವರು ಮಾತುಕತೆ ನಡೆಸಿದರು. ಇನ್ನೂ ಒಂದು ವಾರ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಅವರಿಗೆ ಸಲಹೆ ಮಾಡಿದ್ದಾರೆ ’ ಎಂದು ಪರ್ರೀಕರ್‌ ಅವರ ಆಪ್ತ ಕಾರ್ಯದರ್ಶಿ ರೂಪೇಶ್‌ ಕಾಮತ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT