ಅಮರಾವತಿ, ಆಂಧ್ರಪ್ರದೇಶ: ಚಿತ್ರನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ ಮತ್ತು ಬಿಜೆಪಿ, ಮೈತ್ರಿ ಮಾಡಿಕೊಂಡಿರುವುದಾಗಿ ಎರಡು ಪಕ್ಷಗಳ ಮುಖಂಡರು ಗುರುವಾರ ಘೋಷಿಸಿದ್ದಾರೆ.

ವಿಜಯವಾಡದಲ್ಲಿ ಹಮ್ಮಿಕೊಂಡಿದ್ದ ಸಭೆಯ ನಂತರಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕನ್ನ ಲಕ್ಷ್ಮಿನಾರಾಯಣ ಈ ತೀರ್ಮಾನ ಪ್ರಕಟಿಸಿದ್ದಾರೆ.

ಈ ಮೈತ್ರಿ ಕೂಟವು ಆಂಧ್ರಪ್ರದೇಶದಲ್ಲಿ ಮೂರನೇ ಪರ್ಯಾಯ ಶಕ್ತಿಯಾಗಿ ರೂಪುಗೊಳ್ಳಲಿದೆ ಎಂಬಆಶಯವನ್ನೂ ಅವರು ವ್ಯಕ್ತಪಡಿಸಿದ್ದಾರೆ.

‘ಮುಂಬರುವ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಿಂದ ಆರಂಭಿಸಿ, 2024ರ ಸಾರ್ವತ್ರಿಕ ಚುನಾವಣೆವರೆಗೂ ಎರಡು ಪಕ್ಷಗಳು ಜೊತೆಯಾಗಿ ಕೆಲಸ ಮಾಡಲಿವೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.