ಸೋಮವಾರ, ಮೇ 17, 2021
21 °C

ಜಮ್ಮು ಕಾಶ್ಮೀರ: ಪಿಡಿಪಿ ಕಚೇರಿಗೆ ಬೀಗಮುದ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಜಮ್ಮು ಕಾಶ್ಮೀರದಲ್ಲಿರುವ ಪಿಡಿಪಿ ಕಚೇರಿಗೆ ಪೊಲೀಸರು ಭಾನುವಾರ ಬೀಗಮುದ್ರೆ ಹಾಕಿದ್ದಾರೆ. ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಕಚೇರಿಗೆ ಭೇಟಿ ನೀಡುವ ಮುನ್ನ ಕಚೇರಿಗೆ ಬೀಗಮುದ್ರೆ ಹಾಕಲಾಗಿದೆ.

ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರ ದಾಳಿ ನಂತರ ಜಮ್ಮು ಕಾಶ್ಮೀರದಲ್ಲಿ ಕಾನೂನು ಕ್ರಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಕಚೇರಿಗೆ ಬೀಗಮುದ್ರೆ ಹಾಕಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಐವರು ಪ್ರತ್ಯೇಕತಾವಾದಿಗಳಿಗೆ ನೀಡಲಾಗಿದ್ದ ಭದ್ರತೆಯನ್ನು ಸರ್ಕಾರ ಹಿಂಪಡೆದಿದೆ. ಮಿರ್‌ವಾಯಿಜ್ ಉಮರ್ ಫಾರೂಕ್, ಅಬ್ದುಲ್ ಘನಿ ಭಟ್, ಬಿಲಾಲ್ ಲೋನ್, ಹಾಶಿಮ್ ಖುರೇಷಿ ಮತ್ತು ಶಬೀರ್ ಷಾ ಇವರಿಗೆ ನೀಡಲಾಗಿದ್ದ ಭದ್ರತೆಯನ್ನು ಹಿಂಪಡೆಯಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.
 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು