ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜಮ್ಮು–ಕಾಶ್ಮೀರಕ್ಕೆ ಭಾರಿ ಅನುಕೂಲ’

Last Updated 14 ಆಗಸ್ಟ್ 2019, 20:15 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ‘ಜಮ್ಮು ಮತ್ತು ಕಾಶ್ಮೀರದ ವಿಶೇಷಾಧಿಕಾರವನ್ನು ಅಸಿಂಧುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರದಿಂದ ಜಮ್ಮು, ಕಾಶ್ಮೀರ ಮತ್ತು ಲಡಾಕ್‌ ಪ್ರಾಂತಗಳ ಜನರಿಗೆ ಭಾರಿ ಅನುಕೂಲವಾಗಲಿದೆ’ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಹೇಳಿದ್ದಾರೆ.

73ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನವಾದ ಬುಧವಾರ ದೇಶವನ್ನು ಉದ್ದೇಶಿಸಿ ಅವರು ಮಾಡಿದ ಭಾಷಣದಲ್ಲಿ ಈ ಮಾತು ಹೇಳಿದ್ದಾರೆ.

‘ಈ ಬದಲಾವಣೆಯಿಂದ ಅಲ್ಲಿನ ಜನರಿಗೆ ಭಾರಿ ಅನುಕೂಲವಾಗಲಿದೆ ಎಂಬ ವಿಶ್ವಾಸ ನನಗಿದೆ. ಇದರಿಂದ ಅಲ್ಲಿನ ಜನರು ದೇಶದ ಎಲ್ಲ ಪ್ರಜೆಗಳಂತೆ ಎಲ್ಲಾ ಹಕ್ಕು ಮತ್ತು ಸವಲತ್ತುಗಳನ್ನು ಪಡೆಯಲಿದ್ದಾರೆ. ಇದು ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಹೆಜ್ಜೆಯಾಗಲಿದೆ’ ಎಂದು ಅವರು ಹೇಳಿದ್ದಾರೆ.

‘ಸರ್ಕಾರವು ಹಲವು ಮಹತ್ವದ ಸುಧಾರಣೆಗಳನ್ನು ತಂದಿದೆ. ಶಿಕ್ಷಣ ಹಕ್ಕು ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ, ಮೀಸಲಾತಿಗಳಲ್ಲಿ ಸರ್ಕಾರವು ಬದಲಾವಣೆ ತಂದಿದೆ. ತ್ರಿವಳಿ ತಲಾಕ್‌ ನಿಷೇಧದಂತಹ ಪ್ರಗತಿದಾಯಕ ಹೆಜ್ಜೆ ಇರಿಸಿದೆ. ಈ ಹಿಂದಿನ ಸಂಸತ್ತಿನ ಅಧಿವೇಶನವು ಅತ್ಯಂತ ಫಲಪ್ರದವಾಗಿತ್ತು. ಇದು ಮುಂದಿನ ಐದು ವರ್ಷಗಳಲ್ಲಿ ಏನೇನು ನಡೆಯಲಿದೆ ಎಂಬುದನ್ನು ಸೂಚಿಸುತ್ತದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT