ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರ ಖಾತೆಗೆ ₹15 ಲಕ್ಷ ಹಾಕಲು ಆರ್‌ಬಿಐ ದುಡ್ಡು ಕೊಡಲಿಲ್ಲ: ರಾಮದಾಸ ಆಠವಲೆ

Last Updated 19 ಡಿಸೆಂಬರ್ 2018, 19:36 IST
ಅಕ್ಷರ ಗಾತ್ರ

ಪುಣೆ: ‘ಜನರ ಬ್ಯಾಂಕ್‌ ಖಾತೆಗೆ ₹15 ಲಕ್ಷ ಹಾಕಲು ಭಾರತೀಯ ರಿಸರ್ವ್‌ ಬ್ಯಾಂಕಿನಿಂದ ಹಣ ಕೇಳಿದ್ದೆವು, ಅವರು ಕೊಡಲಿಲ್ಲ. ಹಾಗಾಗಿ ಜನರ ಖಾತೆಗೆ ಹಣ ಹಾಕಲು ಆಗಲಿಲ್ಲ. ಆದ್ದರಿಂದ ಹಂತ ಹಂತವಾಗಿ ಈ ಹಣವನ್ನು ಬ್ಯಾಂಕ್‌ ಖಾತೆಗೆ ಹಾಕಲಾಗುವುದು’ ಎಂದುಕೇಂದ್ರದ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ ಆಠವಲೆ ಹೇಳಿದರು.

‘ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಭರವಸೆಯಂತೆಪ್ರತಿಯೊಬ್ಬರೂ ತಮ್ಮ ಬ್ಯಾಂಕ್‌ ಖಾತೆಗೆ ₹15 ಲಕ್ಷವನ್ನು ಪಡೆಯಲಿದ್ದಾರೆ. ಇಷ್ಟು ಹಣವನ್ನು ಒಂದೇ ಬಾರಿಗೆ ನೀಡಲು ತೊಂದರೆಗಳಿವೆ. ಸರ್ಕಾರದ ಬಳಿಯೂ ಅಷ್ಟು ಹಣ ಇಲ್ಲ. ಕೆಲವು ತಾಂತ್ರಿಕ ಸಮಸ್ಯೆಗಳಿಂದ ಇದು ವಿಳಂಬವಾಗಿದೆ. ಭಾರತೀಯ ರಿಸರ್ವ್‌ ಬ್ಯಾಂಕ್‌ ಸಹ ನೀಡುತ್ತಿಲ್ಲ’ ಎಂದು ಸಾಂಗ್ಲಿ ಜಿಲ್ಲೆಯ ಇಸ್ಲಾಂಪುರದಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದರು.

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ. ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಭಾರತೀಯ ಉದ್ಯಮಿಗಳು ವಿದೇಶಗಳ ಬ್ಯಾಂಕಿನಲ್ಲಿಟ್ಟಿರುವ ಕಪ್ಪು ಹಣವನ್ನು ಮರಳಿ ತಂದು ಪ್ರತಿಯೊಬ್ಬರ ಖಾತೆಗೆ ₹15 ಲಕ್ಷ ಜಮೆ ಮಾಡುವುದಾಗಿ ಮೋದಿ ಅವರು 2014ರ ಲೋಕಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಹೇಳಿದ್ದರು.

ಮೋದಿ ಅವರು ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ, ದ್ರೋಹ ಮಾಡಿದ್ದಾರೆ ಎಂದುಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಇತ್ತೀಚೆಗೆ ಆರೋಪಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT