ಸೋಮವಾರ, ನವೆಂಬರ್ 18, 2019
25 °C

ಅನರ್ಹ ಶಾಸಕರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

Published:
Updated:

ನವದೆಹಲಿ: ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಬುಧವಾರಕ್ಕೆ ಮುಂದೂಡಿದೆ. 

ಮಂಗಳವಾರ ಬೆಳಗ್ಗೆ  ವಿಚಾರಣೆ ಆರಂಭವಾಗುತ್ತಿದ್ದಂತೆಯೇ ಕಾಂಗ್ರೆಸ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು‌ ಚುನಾವಣೆ ನೀತಿ ಸಂಹಿತಿಗೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ವಿಚಾರಣೆ ಬಾಕಿ ಇದೆ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಎನ್.ವಿ.‌ರಮಣ ಅವರು ಅರ್ಜಿಯ ವಿಚಾರಣೆಯನ್ನು ‌ಮುಂದೂಡಿದರು.  

ಚುನಾವಣೆ ಆಯೋಗದ ಪರ ‌ವಕೀಲ ರಾಕೇಶ್ ದ್ವಿವೇದಿ ಅವರು ಹೈಕೋರ್ಟ್ ನಲ್ಲಿ ಬಾಕಿ ಇರುವ ನೀತಿ ಸಂಹಿತೆ ಪ್ರಶ್ನಿಸಿರುವ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಬಾರದು ಎಂದು ತಿಳಿಸಿದ್ದರಿಂದ ಕಾಂಗ್ರೆಸ್ ಪರ ‌ವಕೀಲರನ್ನು ಪೀಠ ಪ್ರಶ್ನಿಸಿತು. ಅಲ್ಲದೆ, ವಿಚಾರಣೆಯನ್ನು ನಾಳೆಗೆ ನಿಗದಿ ಮಾಡಿತು. 

ಕಾಂಗ್ರೆಸ್‌ ಮತ್ತು ಜೆಡಿಎಸ್‌ನ 17 ಶಾಸಕರು ತಮ್ಮ ವಿರುದ್ಧದ ಅನರ್ಹತೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. 

ಪ್ರತಿಕ್ರಿಯಿಸಿ (+)