ಸೋಮವಾರ, ಫೆಬ್ರವರಿ 24, 2020
19 °C

ಶಾಹೀನ್ ಬಾಗ್ ಪ್ರತಿಭಟನೆ ತೆರವುಗೊಳಿಸುವಂತೆ ಸುಪ್ರೀಂಕೋರ್ಟ್‌‌ಗೆ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಶಾಹೀನ್ ಬಾಗ್‌‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ತೆರೆವುಗೊಳಿಸುವಂತೆ ಕೇಂದ್ರ ಹಾಗೂ ಇತರರಿಗೆ ನಿರ್ದೇಶನ ನೀಡುವಂತೆ ವ್ಯಕ್ತಿಯೊಬ್ಬರು ಸುಪ್ರೀಂಕೋರ್ಟ್‌‌ಗೆ ಮನವಿ ಮಾಡಿದ್ದಾರೆ.

ಸೋಮವಾರ ಅರ್ಜಿ ಸಲ್ಲಿಸಿರುವ ನಂದಕಿಶೋರ್ ಗರ್ಗ್ ಎಂಬುವರು ಕಳೆದ ಒಂದೂವರೆ ತಿಂಗಳಿಂದ ದೆಹಲಿಯ ಶಾಹೀನ್ ಬಾಗ್, ಕಾಳಿಂಡಿ ಕುಂಜ್ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಇದರಿಂದಾಗಿ ದೆಹಲಿ ಹಾಗೂ ನೋಯ್ಡಾಗಳ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟು ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ| ಶಾಹೀನ್‌ ಬಾಗ್‌ ಪ್ರತಿಭಟನಾ ಸ್ಥಳದಲ್ಲಿ ಮತ್ತೆ ಗುಂಡಿನ ದಾಳಿ: ವ್ಯಕ್ತಿ ವಶ

ಅಲ್ಲದೆ, ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುವುದರಿಂದ ಜನರ ದಿನನಿತ್ಯದ ಕೆಲಸಗಳಿಗೆ ತೊಂದರೆ ಉಂಟಾಗುತ್ತಿದ್ದು, ಇದನ್ನು ತಪ್ಪಿಸಲು ಸಮಗ್ರ ಮಾರ್ಗ ಸೂಚಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡುವಂತೆಯೂ ಮನವಿಯಲ್ಲಿ ಕೋರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು