ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈ–ಕ ಜಿಲ್ಲೆಗಳಲ್ಲಿ ವಾಸಿಸುವವರಿಗೆ ಮೀಸಲಾತಿ ಪ್ರಶ್ನಿಸಿ ಅರ್ಜಿ

ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶ
Last Updated 17 ಏಪ್ರಿಲ್ 2019, 18:10 IST
ಅಕ್ಷರ ಗಾತ್ರ

ನವದೆಹಲಿ: ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶ ನೀಡಲು ಹೈದರಾಬಾದ್‌ ಕರ್ನಾಟಕದ ಆರು ಜಿಲ್ಲೆಗಳಲ್ಲಿ ವಾಸವಾಗಿರುವವರಿಗೆ ಮೀಸಲಾತಿ ನೀಡುವ ಕರ್ನಾಟಕ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಈ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ರಾಜ್ಯದಲ್ಲಿ 10 ವರ್ಷಗಳ ಶಿಕ್ಷಣ ಪೂರೈಸಿರಬೇಕು ಎಂಬ ಮಾನದಂಡ ವಿಧಿಸಿ 2019ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿದ್ದ ಎಂಬಿಬಿಎಸ್‌ ಹಾಗೂ ಬಿಡಿಎಸ್‌
ಪ್ರವೇಶಾಕಾಂಕ್ಷಿಗಳೇ ಈ ಅರ್ಜಿ ಸಲ್ಲಿಸಿದ್ದಾರೆ.

ಕೆ.ಸೌರಭ್ ಹಾಗೂ ಇತರರು ತಿದ್ದುಪಡಿ ಅರ್ಜಿ ಸಲ್ಲಿಸಿದ್ದಾರೆ. ಹೈದರಾಬಾದ್‌ ಕರ್ನಾಟಕ ಪ್ರದೇಶದಲ್ಲಿರುವ ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶ ನೀಡುವುದಕ್ಕೆ ಸಂಬಂಧಿಸಿದಂತೆ (ಕರ್ನಾಟಕ ಶೈಕ್ಷಣಿಕ ಸಂಸ್ಥೆಗಳ ಕಾಯ್ದೆ ಹಾಗೂ ಕರ್ನಾಟಕ ಖಾಸಗಿ ಅನುದಾನರಹಿತ ಶೈಕ್ಷಣಿಕ ಸಂಸ್ಥೆಗಳ ಕಾಯ್ದೆ) ಕರ್ನಾಟಕ ಸರ್ಕಾರ 2013ರಲ್ಲಿ ಹೊರಡಿಸಿರುವ ಆದೇಶವು ಭಾರತೀಯ ವೈದ್ಯಕೀಯ ಮಂಡಳಿ ರೂಪಿಸಿರುವ ಕಾಯ್ದೆಗೆ ಒಳಪಟ್ಟಿರುತ್ತದೆ ಎಂದು ಅವರು ವಾದಿಸಿದ್ದಾರೆ.

ಹೀಗಾಗಿ, 2019ರ ಮಾರ್ಚ್‌ 16ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿರುವ ಆದೇಶವನ್ನು ವಜಾ ಮಾಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT