ಶುಕ್ರವಾರ, ಜೂಲೈ 10, 2020
23 °C

ಪಿಐಬಿ ಪ್ರಧಾನ ನಿರ್ದೇಶಕ ಧತವಾಲಿಯಾಗೆ ಕೊರೊನಾ ಸೋಂಕು

ಪಿಟಿಐ Updated:

ಅಕ್ಷರ ಗಾತ್ರ : | |

Covid-19

ನವದೆಹಲಿ: ಪ್ರೆಸ್ ಇನ್ಫರ್ಮೇಷನ್ ಬ್ಯುರೊ (ಪಿಐಬಿ) ಪ್ರಧಾನ ನಿರ್ದೇಶಕ ಕೆ.ಎಸ್.ಧತವಾಲಿಯಾ ಅವರಿಗೆ ಕೋವಿಡ್-19 ದೃಢಪಟ್ಟಿದೆ. ಅವರು ಚಿಕಿತ್ಸೆಗಾಗಿ ಏಮ್ಸ್ ಗೆ ದಾಖಲಾಗಿದ್ದಾರೆ. 

ಧತವಾಲಿಯಾ ಅವರು ಕೇಂದ್ರ ಸರ್ಕಾರದ ಪ್ರಧಾನ ವಕ್ತಾರರೂ ಆಗಿದ್ದಾರೆ. 

ಅವರು ಸೋಮವಾರ ಮತ್ತು ಬುಧವಾರ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್, ನಿತಿನ್ ಗಡ್ಕರಿ ಹಾಗೂ ಪ್ರಕಾಶ್ ಜಾವಡೇಕರ್ ಅವರೊಂದಿಗ ವೇದಿಕೆ ಹಂಚಿಕೊಂಡಿದ್ದರು. ಕೇಂದ್ರ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರಗಳ ಕುರಿತು ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಳ್ಳಲಾಗಿತ್ತು‌.

ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ನಡೆಸಲಾದ ಮಾಧ್ಯಮ ಗೋಷ್ಠಿಯಲ್ಲಿ ಹಲವು ಹಿರಿಯ ಪತ್ರಕರ್ತರು ಭಾಗಿಯಾಗಿದ್ದರು. ಅವರೆಲ್ಲರೂ ಸಾಕಷ್ಟು ಅಂತರ ಕಾಯ್ದುಕೊಂಡು ಆಸೀನರಾಗಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು