ಭಾನುವಾರ, ಜೂನ್ 7, 2020
28 °C

ವಲಸೆ ಕಾರ್ಮಿಕರಿಗೆ ಸೌಕರ್ಯ : ಸುಪ್ರೀಂಕೋರ್ಟ್‌ನಲ್ಲಿ ಪಿಐಎಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದ ಹಲವೆಡೆ ಸಿಲುಕಿರುವ ವಲಸೆ ಕಾರ್ಮಿಕರಿಗೆ ವಾಹನಗಳ ಸೌಲಭ್ಯದ ಜೊತೆಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. 

ವಕೀಲ ದೀಪಕ್ ಪ್ರಕಾಶ್‌ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ‘ಸೌಲಭ್ಯಗಳಿಲ್ಲದೇ ಹಲವರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ನ್ಯಾಯಾಲಯ ತಕ್ಷಣ ಮಧ್ಯ ಪ್ರವೇಶಿಸಬೇಕು’ ಎಂದು ಅವರು ಕೋರಿದ್ದಾರೆ. 

‘ಕೆಲವು ರಾಜ್ಯಗಳ ಅಧಿಕಾರಿಗಳಲ್ಲಿ ಸಮನ್ವಯದ ತೀವ್ರ ಕೊರತೆಯಿರುವುದರಿಂದ ಸಂಕಷ್ಟಕ್ಕೆ ಈಡಾಗಿರುವ ಕಾರ್ಮಿಕರಿಗೆ ಪರಿಹಾರ ದೊರಕಿಸುವುದು ಸಾಧ್ಯವಾಗಿಲ್ಲ’ ಎಂದು ಅರ್ಜಿಯಲ್ಲಿ ದೂರಲಾಗಿದೆ. 

 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು