ಗುರುವಾರ , ಜೂಲೈ 9, 2020
29 °C

ಇ–ಕಾಮರ್ಸ್‌ ತಾಣಗಳ ಪ್ರತಿಕ್ರಿಯೆ, ಕೇಂದ್ರದ ಪ್ರತಿಕ್ರಿಯೆಗೆ ಹೈಕೋರ್ಟ್ ನೋಟಿಸ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಇ–ಕಾಮರ್ಸ್‌ ತಾಣಗಳಲ್ಲಿ ಮಾರಾಟ ಮಾಡಲಾಗುವ ಉತ್ಪನ್ನದ ಮಾಹಿತಿಯಲ್ಲಿ ಉತ್ಪಾದಕ ದೇಶದ ಹೆಸರನ್ನು ಪ್ರದರ್ಶಿಸಲು ಸೂಚನೆ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯೊಂದಕ್ಕೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ನೋಟಿಸ್ ನೀಡಿದೆ. 

ಅರ್ಜಿ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಹಾಗೂ ನ್ಯಾಯಮೂರ್ತಿ ಪ್ರತೀಕ್‌ ಜಲಾನ್‌ ಅವರ ಪೀಠ, ಇದೇ 22ರೊಳಗೆ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರ ಸೇರಿದಂತೆ ಇ–ಕಾಮರ್ಸ್ ತಾಣಗಳಾದ ಅಮೆಜಾನ್‌, ಫ್ಲಿಪ್‌ಕಾರ್ಟ್‌, ಸ್ನಾಪ್‌‌ಡೀಲ್‌ಗೆ ನೋಟಿಸ್‌ ಜಾರಿಗೊಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು