ಶುಕ್ರವಾರ, ಜನವರಿ 27, 2023
20 °C

ಮದ್ಯ ಮಾರಾಟ ನಿಷೇಧಿಸಿ: ಸುಪ್ರೀಂ‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಮದ್ಯ ಮಾರಾಟಕ್ಕೆ ನೀಡಿರುವ ಅನುಮತಿಯನ್ನು ಹಿಂತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿ ವಕೀಲ ರಾಜೀವ್‌ ಕುಮಾರ್‌ ರಂಜನ್‌ ಎಂಬುವರು ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

‘ಮದ್ಯ ಮಾರಾಟ ಆರಂಭಿಸಿದ್ದರಿಂದ ಜನರು ದೊಡ್ಡ ಪ್ರಮಾಣದಲ್ಲಿ ಗುಂಪು ಕೂಡುತ್ತಿದ್ದಾರೆ. ಇದರಿಂದಾಗಿ ಲಾಕ್‌ಡೌನ್‌ನ ಉದ್ದೇಶವೇ ವಿಫಲವಾಗುವ ಅಪಾಯವಿದೆ’ ಎಂದು ಮನವಿಯಲ್ಲಿ ಹೇಳಿದ್ದಾರೆ.

‘ಪ್ರತಿಯೊಬ್ಬನಿಗೂ ಜೀವಿಸುವ ಹಕ್ಕನ್ನು ನೀಡುವ, ಸಂವಿಧಾನದ 21ನೇ ವಿಧಿಯ ಉಲ್ಲಂಘನೆಯೂ ಆಗಲಿದೆ’ ಎಂದೂ ವಾದಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು