ಋತುಚಕ್ರ ಕಾರ್ಯಕ್ರಮ: ಕೇರಳ ಸಿ.ಎಂ ಗೈರು

7

ಋತುಚಕ್ರ ಕಾರ್ಯಕ್ರಮ: ಕೇರಳ ಸಿ.ಎಂ ಗೈರು

Published:
Updated:

ಕೊಚ್ಚಿ: ಋತುಚಕ್ರದ ಕುರಿತಾದ ಮೂಢನಂಬಿಕೆಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಭಾನುವಾರ ಇಲ್ಲಿ ಆಯೋಜಿಸಲಾಗಿದ್ದ ಜಾಗೃತಿ ಕಾರ್ಯಕ್ರಮದಿಂದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ದೂರ ಉಳಿದಿರುವುದು ವಿವಾದಕ್ಕೀಡಾಗಿದೆ.

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರು ಪ್ರವೇಶಿಸಲು ಸುಪ್ರೀಂ ಕೋರ್ಟ್‌ ಅವಕಾಶ ನೀಡಿರುವುದನ್ನು ವಿರೋಧಿಸಿ ಬಲಪಂಥೀಯ ಸಂಘಟನೆಗಳು ವ್ಯಾಪಕ ಪ್ರತಿಭಟನೆ ನಡೆಸಿದ್ದವು. ಇದಕ್ಕೆ ಪ್ರತಿಯಾಗಿ ಕೆಲವು ಸಂಘಟನೆಗಳು ಋತುಚಕ್ರಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಕಾರ್ಯಕ್ರಮ ಆಯೋಜಿಸಿದ್ದವು.

ಭಾನುವಾರದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ವಿಜಯನ್‌ ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದರು.

ಸರ್ಕಾರದ ಮೂಲಗಳ ಪ್ರಕಾರ ಮುಖ್ಯಮಂತ್ರಿ ಅವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಒಪ್ಪಿಗೆ ನೀಡಿರಲಿಲ್ಲ.

ಆದರೆ, ಕಟ್ಟಾ ಎಡಪಂಥೀಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದ ಕಾರಣ ವಿಜಯನ್‌ ದೂರ ಉಳಿದರು ಎಂದು ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !