ಮಂಗಳವಾರ, ಜನವರಿ 21, 2020
18 °C

ಪ್ರಜಾಪ್ರಭುತ್ವ ರಕ್ಷಿಸಬೇಕಿದೆ: ಸಿಎಎ ವಿರುದ್ಧ 11 ಸಿಎಂಗಳಿಗೆ ಪಿಣರಾಯಿ ಪತ್ರ

ಪಿಟಿಐ Updated:

ಅಕ್ಷರ ಗಾತ್ರ : | |

ತಿರುವನಂತಪುರ: ಜಾತ್ಯತೀತ ಮೌಲ್ಯಗಳನ್ನು ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಾದ ಅಗತ್ಯವಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 11 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಕೈಗೊಂಡ ಕೆಲವೇ ದಿನಗಳಲ್ಲಿ ಅವರು ಈ ಕ್ರಮ ಕೈಗೊಂಡಿದ್ದಾರೆ.

‘ಪೌರತ್ವ ತಿದ್ದುಪಡಿ ಕಾಯ್ದೆಯ ಪರಿಣಾಮವಾಗಿ ಸಮಾಜದ ದೊಡ್ಡ ವರ್ಗದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಬಯಸುವವರು ಒಗ್ಗಟ್ಟಾಗಬೇಕಾದ ಸಮಯವಿದು’ ಎಂದು ಪಿಣರಾಯಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಿಎಎ ರದ್ದುಗೊಳಿಸಬೇಕು ಎಂದು ಕೇರಳ ವಿಧಾನಸಭೆಯಲ್ಲಿ ಮಂಗಳವಾರ ಆಡಳಿತಾರೂಢ ಸಿಪಿಐ(ಎಂ) ನಿಲುವಳಿ ಮಂಡಿಸಿತ್ತು. ಪ್ರತಿಪಕ್ಷವಾದ ಕಾಂಗ್ರೆಸ್ ನೇತೃತ್ವದ ಯುಡಿಎಫ್ ನಿಲುವಳಿಗೆ ಬೆಂಬಲ ಸೂಚಿಸಿತ್ತು.

ಇನ್ನಷ್ಟು...

ಸಿಎಎ ರದ್ದತಿಗೆ ನಿರ್ಣಯ: ಕೇರಳ ವಿಧಾನಸಭೆಯಲ್ಲಿ ಮೂಡಿದ ಒಮ್ಮತ

ವಿಧಾನಸಭೆಗಳಿಗೆ ವಿಶೇಷ ಹಕ್ಕಿದೆ: ಸಿಎಎ ವಿರುದ್ಧದ ನಿರ್ಣಯ ಸಮರ್ಥಿಸಿದ ಕೇರಳ ಸಿಎಂ

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು