ಶನಿವಾರ, ಫೆಬ್ರವರಿ 29, 2020
19 °C

ಶಾಹೀನ್‌‌ಬಾಗ್‌ ಪ್ರತಿಭಟನಕಾರರ ತೆರವಿಗೆ ಒತ್ತಾಯ: ಫೆ.10ಕ್ಕೆ ಅರ್ಜಿ ವಿಚಾರಣೆ  

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Supreme Court

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ಶಾಹೀನ್‌ಬಾಗ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರನ್ನು ಅಲ್ಲಿಂದ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಸಲ್ಲಿಸಿದ ಅರ್ಜಿ ವಿಚಾರಣೆ ಫೆಬ್ರುವರಿ 10 ರಂದು ನಡೆಯಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಅರ್ಜಿ ಬಗ್ಗೆ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್ ಸಮಸ್ಯೆ ನಮಗೆ ಅರ್ಥವಾಗಿದೆ. ದೆಹಲಿ ಚುನಾವಣೆ ಮುಗಿದ ನಂತರವೇ  ಅರ್ಜಿ ವಿಚಾರಣೆ ನಡೆಸಲಾಗುವುದು ಎಂದಿದೆ.

ದೆಹಲಿಯಲ್ಲಿ ನಾಳೆ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ.

ವಕೀಲ ಅಮಿತ್ ಸಹ್ನಿ ಅವರು ಸಲ್ಲಿಸಿದ ಅರ್ಜಿಯನ್ನು ಮುಂದಿನ ಭಾನುವಾರ ವಿಚಾರಣೆಗೊಳಪಡಿಸಲಾಗುವುದು ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ಕೆಎಂ ಜೋಸೆಫ್ ಅವರ ನ್ಯಾಯಪೀಠ ಹೇಳಿದೆ.

 ಶಾಹೀನ್‌ಬಾಗ್‌ನಲ್ಲಿ ಪ್ರತಿಭಟನೆ ನಡೆಯುತ್ತಿರುವುದರಿಂದ ಸಾರ್ವಜನಿಕರಿಗೆ, ವಾಹನಗಳಿಗೆ  ಸಂಚರಿಸಲು ಅಡಚಣೆಯುಂಟಾಗಿದೆ. ರಸ್ತೆ ಬಂದ್ ಆಗಿರುವುದರಿಂದ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಲು ಹೆಚ್ಚು ಸಮಯ ಬೇಕಾಗುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು