ಭಾನುವಾರ, ಆಗಸ್ಟ್ 1, 2021
25 °C

ಪಿ.ಎಂ. ಕೇರ್ಸ್ ನಿಧಿ ವರ್ಗಾವಣೆ‌: ವರದಿ ಕೇಳಿದ ಸುಪ್ರೀಂ ಕೋರ್ಟ್‌

(ಪಿಟಿಐ): Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್–19 ಸೋಂಕು ನಿಯಂತ್ರಣಕ್ಕಾಗಿ ಸರ್ಕಾರದೊಂದಿಗೆ ಕೈಜೋಡಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಪಿ.ಎಂ. ಕೇರ್ಸ್‌ ನಿಧಿ ಅಡಿ ನೀಡಿರುವ ದೇಣಿಗೆ ಕುರಿತು ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್‌ ಕೇಂದ್ರಕ್ಕೆ ಸೂಚಿಸಿದೆ.

ಈ ಸಂಬಂಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌)ಯವಿಚಾರಣೆಯನ್ನು ಬುಧವಾರ ನಡೆಸಿದ ನ್ಯಾಯಮೂರ್ತಿ ಅಶೋಕ್‌ ಭೂಷಣ್ ನೇತೃತ್ವದ ಪೀಠ, ಈ ಸಂಬಂಧ ಎರಡು ವಾರಗಳೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ಪಿ.ಎಂ. ಕೇರ್ಸ್ ನಿಧಿ ಮೂಲಕ ದೇಣಿಗೆ ರೂಪದಲ್ಲಿ ಇದುವರೆಗೆ ಸಂಗ್ರಹಿಸಲಾದ ಮೊತ್ತದ ಬಳಕೆ ಕುರಿತು ಕೇಂದ್ರ ಸರ್ಕಾರ ನಿರ್ದಿಷ್ಟ ಮಾಹಿತಿ ನೀಡಿಲ್ಲ ಎಂದು ಸ್ವಯಂ ಸೇವಾ ಸಂಸ್ಥೆಯಾದ ಸೆಂಟರ್‌ ಫಾರ್‌ ಪಿಐಎಲ್‌ ಸಲ್ಲಿಸಿರುವ ಅರ್ಜಿಯಲ್ಲಿ ದೂರಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು