ಬುಧವಾರ, ಫೆಬ್ರವರಿ 19, 2020
30 °C

ಏರ್‌ ಇಂಡಿಯಾ ಸಿಬ್ಬಂದಿಗೆ ಮೋದಿ ಶ್ಲಾಘನೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್‌–19 ವೈರಸ್‌ ಸೋಂಕು ಬಾಧಿತ ವುಹಾನ್‌ನಿಂದ ಭಾರತದ ಹಾಗೂ ಮಾಲ್ಡೀವ್ಸ್‌ನ 647 ಪ್ರಜೆಗಳನ್ನು ಭಾರತಕ್ಕೆ ಕರೆತಂದ ಏರ್‌ ಇಂಡಿಯಾ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಬದ್ಧತೆಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. 

ಈ ಕುರಿತು ಪತ್ರದ ಮುಖೇನ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ‘ಸಂಕಷ್ಟಕ್ಕೆ ಸಿಲುಕಿದ್ದ ಜನರನ್ನು ರಕ್ಷಿಸಿದ ತಂಡದ ಸದಸ್ಯರಿಗೆ ಅಭಿನಂದನಾ ಪತ್ರವನ್ನು ಪ್ರಧಾನಿ ಅವರು ನೀಡಿದ್ದು, ನಾಗರಿಕ ವಿಮಾನಯಾನ ಇಲಾಖೆಯ ರಾಜ್ಯ ಖಾತೆ ಸಚಿವರು ಇದನ್ನು ಸಿಬ್ಬಂದಿಗೆ ಹಸ್ತಾಂತರಿಸಲಿದ್ದಾರೆ’ ಎಂದು ಪ್ರಧಾನಿ ಕಚೇರಿ ತಿಳಿಸಿದೆ. ಫೆ.5ರಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲೂ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಲಾಗಿತ್ತು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)