8ರಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

ಮಂಗಳವಾರ, ಏಪ್ರಿಲ್ 23, 2019
31 °C
‘ಪಿ.ಎಂ.ನರೇಂದ್ರ ಮೋದಿ’ ಚಿತ್ರ ಪ್ರದರ್ಶನ ತಡೆ ಕೋರಿ ಅರ್ಜಿ

8ರಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

Published:
Updated:
Prajavani

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜೀವನ ಆಧಾರಿತ ಸಿನಿಮಾ ಬಿಡುಗಡೆಗೆ ತಡೆ ನೀಡಬೇಕು ಎಂದು ಕೋರಿ ಕಾಂಗ್ರೆಸ್‌ ಮುಖಂಡರು ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್‌ ಗುರುವಾರ ಸಮ್ಮತಿಸಿದೆ.

ನ್ಯಾಯಮೂರ್ತಿ ಎಸ್‌.ಎ. ಬೋಬ್ಡೆ ಅವರ ನೇತೃತ್ವದ ಪೀಠ ಅರ್ಜಿ ವಿಚಾರಣೆಯನ್ನು ಇದೇ 8ರಂದು (ಸೋಮವಾರ) ನಡೆಸುವುದಾಗಿ ತಿಳಿಸಿದೆ.

ಕಾಂಗ್ರೆಸ್‌ ಮುಖಂಡರೂ ಆಗಿರುವ ವಕೀಲ ಅಮನ್‌ ಪನ್ವಾರ್‌ ಅರ್ಜಿದಾರರಾಗಿದ್ದು, ಅವರ ಪರ ಹಿರಿಯ ವಕೀಲ ಎ.ಎಂ.ಸಿಂಗ್ವಿ ವಾದ ಮಾಡಲಿದ್ದಾರೆ. ವಿವೇಕ್‌ ಒಬೆರಾಯ್‌ ನಟಿಸಿರುವ ಈ ಚಿತ್ರದ ಬಿಡುಗಡೆ ವಿಷಯದಲ್ಲಿ ಮಧ್ಯ ಪ್ರವೇಶಿಸಲು ಎರಡು ಹೈಕೋರ್ಟ್‌ಗಳು ನಿರಾಕರಿಸಿದ್ದವು.‌

ಈ ಚಲನಚಿತ್ರ ಚುನಾವಣಾ ಸಂದರ್ಭದಲ್ಲಿ ಬಿಡುಗಡೆಯಾದರೆ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಧಕ್ಕೆಯಾಗುತ್ತದೆ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಿದ್ದಾರೆ.

’ಈ ಸಿನಿಮಾ ಏಪ್ರಿಲ್ 5ರಂದು ಬಿಡುಗಡೆಯಾಗುತ್ತದೆ ಎನ್ನಲಾಗಿತ್ತು. ಆದರೆ ಕೆಲ ಮಾಧ್ಯಮ ವರದಿಗಳ ಪ್ರಕಾರ, ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆಯಂತೆ‘ ಎಂದು ಸಿಂಗ್ವಿ ಹೇಳಿದ್ದಾರೆ.

ಚಿತ್ರ ಬಿಡುಗಡೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ನಿರ್ಮಾಪಕರು ಪ್ರಕಟಿಸಿದ್ದಾರೆ.

ಮಧ್ಯಪ್ರದೇಶ ಹೈಕೋರ್ಟ್‌ನ ಇಂದೂರ್‌ ಪೀಠವು ’ಪಿ.ಎಂ.ನರೇಂದ್ರ ಮೋದಿ‘ ಸಿನಿಮಾ ಬಿಡುಗಡೆಗೆ ತಡೆ ನೀಡಲು ಬುಧವಾರ ನಿರಾಕರಿಸಿತ್ತು. ’ಈ ವಿಷಯವನ್ನು ಚುನಾವಣಾ ಆಯೋಗ ನೋಡಿಕೊಳ್ಳುತ್ತದೆ‘ ಎಂದು ಮುಂಬೈ ಹೈಕೋರ್ಟ್ ಸೋಮವಾರ ಅರ್ಜಿಯನ್ನು ವಿಲೇವಾರಿ ಮಾಡಿತ್ತು.

ಬರಹ ಇಷ್ಟವಾಯಿತೆ?

 • 5

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !