ಗುರುವಾರ , ಏಪ್ರಿಲ್ 9, 2020
19 °C

ಕೋವಿಡ್-19 ಭೀತಿ: ಪ್ರಧಾನಿ ನರೇಂದ್ರ ಮೋದಿ ಬ್ರಸೆಲ್ಸ್ ಭೇಟಿ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಬ್ರಸೆಲ್ಸ್ ಭೇಟಿಯು ರದ್ದಾಗಿದ್ದು, ಮರು ನಿಗದಿಪಡಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಗುರುವಾರ ತಿಳಿಸಿದೆ. 

ಭಾರತ –ಯುರೋಪ್ ಒಕ್ಕೂಟ ಶೃಂಗಸಭೆ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್, ಕೋವಿಡ್ -19 ಕಾರಣದಿಂದಾಗಿ  ಉಭಯ ದೇಶಗಳ ಪ್ರತಿನಿಧಿಗಳು ಪ್ರವಾಸ ಕೈಗೊಳ್ಳಬಾರದು ಎಂದು ನಿರ್ಧರಿಸಲಾಗಿದೆ ಎಂದು ಹೇಳಿದರು.

ಭಾರತ-ಇಯು ಶೃಂಗಸಭೆ ಮಾರ್ಚ್ 13 ರಂದು ಬ್ರಸೆಲ್ಸ್‌ನಲ್ಲಿ ನಡೆಯಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಬುಧವಾರ, ಬ್ರಸೆಲ್ಸ್‌ನಿಂದ ಹತ್ತು ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಬೆಲ್ಜಿಯಂನಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 23 ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಶೃಂಗಸಭೆಯನ್ನು ಪರಸ್ಪರ ಅನುಕೂಲಕರ ದಿನಾಂಕಕ್ಕೆ ಮತ್ತೆ ನಿಗದಿಪಡಿಸಲಾಗುವುದು ಎಂದು ವಿದೇಶಾಂಗ ವಕ್ತಾರರು ತಿಳಿಸಿದ್ದಾರೆ. 

ಜಾಗತಿಕ ಆರೋಗ್ಯದ ಬಗ್ಗೆ ಕಾಳಜಿ ಮತ್ತು ಬದ್ಧತೆ ತೋರುವ ಸಲುವಾಗಿ ಇಯು ಮತ್ತು ಭಾರತದ ನಡುವಿನ ನಿಕಟ ಸಹಕಾರದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಮತ್ತು ಏಕಾಏಕಿ ಕಾಣಿಸಿಕೊಂಡಿರುವ ಕೋವಿಡ್ -19 ಬಿಕ್ಕಟ್ಟು ಶೀಘ್ರದಲ್ಲೇ ಕಡಿಮೆಯಾಗಲಿದೆ ಎಂದು ಭಾವಿಸುತ್ತೇವೆ ಎಂದು ರವೀಶ್ ಕುಮಾರ್ ತಿಳಿಸಿದ್ದಾರೆ.

ಆದಾಗ್ಯೂ, ಪ್ರಧಾನಿ ಮೋದಿಯವರ ಬಾಂಗ್ಲಾದೇಶ ಭೇಟಿ ನಿಗದಿಯಂತೆ ನಡೆಯಲಿದೆ ಮತ್ತು ಅದರ ವಿವರಗಳನ್ನು ಮುಂದಿನ ದಿನಗಳಲ್ಲಿ ಹಂಚಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು