ನೆಹರು, ರಾಜೀವ್ ಗಾಂಧಿಯಂತೆ ಮೋದಿ ಬಹು ವರ್ಚಸ್ಸಿನ ನಾಯಕ: ರಜನೀಕಾಂತ್ 

ಭಾನುವಾರ, ಜೂನ್ 16, 2019
32 °C

ನೆಹರು, ರಾಜೀವ್ ಗಾಂಧಿಯಂತೆ ಮೋದಿ ಬಹು ವರ್ಚಸ್ಸಿನ ನಾಯಕ: ರಜನೀಕಾಂತ್ 

Published:
Updated:

ಚೆನ್ನೈ: ಲೋಕಸಭಾ ಚುನಾವಣೆಯಲ್ಲಿ ಭಾರಿ ಗೆಲುವು ಸಾಧಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ತಮಿಳು ಸಿನಿಮಾ ತಾರೆ ಮತ್ತು ರಾಜಕಾರಣಿ ರಜನಿಕಾಂತ್‌ ಹೊಗಳಿದ್ದಾರೆ.

ಜವಾಹರಲಾಲ್‌ ನೆಹರೂ, ಇಂದಿರಾ ಗಾಂಧಿ, ರಾಜೀವ್‌ ಗಾಂಧಿ ಮತ್ತು ಅಟಲ್‌ ಬಿಹಾರಿ ವಾಜಪೇಯಿ ಅವರಂತಹ ‘ಜನಾಕರ್ಷಕ ನಾಯಕರ’ ಸಾಲಿಗೆ ಈಗ ಮೋದಿ ಅವರೂ ಸೇರಿದ್ದಾರೆ ಎಂದು ರಜನಿಕಾಂತ್‌ ಹೇಳಿದ್ದಾರೆ.

ತಮಿಳುನಾಡಿನ ಫಲಿತಾಂಶವನ್ನು ವಿಶ್ಲೇಷಿಸಿದ ಅವರು, ‘ಇಡೀ ದೇಶದಲ್ಲಿ ಮೋದಿಪರ ಅಲೆ ಇದ್ದರೆ ತಮಿಳುನಾಡಿನಲ್ಲಿ ಮೋದಿ ವಿರೋಧಿ ಅಲೆ ಇತ್ತು. ಈ ಅಲೆಯ ಜತೆಗೆ ಇದ್ದವರೆಲ್ಲ ಗೆದ್ದಿದ್ದಾರೆ’ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ರಾಜೀನಾಮೆ ನೀಡುವುದು ಅನಗತ್ಯ. ಕಾಂಗ್ರೆಸ್‌ ಪಕ್ಷದ ಚುನಾವಣಾ ಪ್ರಚಾರದಲ್ಲಿ ಎರಡನೇ ಹಂತದ ನಾಯಕರು ಸಹಕರಿಸಲಿಲ್ಲ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.  

ತಮಿಳುನಾಡು ವಿಧಾನಸಭೆಗೆ 2021ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವರು ತಮ್ಮ ಪಕ್ಷವನ್ನು ಸಜ್ಜುಗೊಳಿಸುತ್ತಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 8

  Happy
 • 1

  Amused
 • 0

  Sad
 • 0

  Frustrated
 • 4

  Angry

Comments:

0 comments

Write the first review for this !