ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಪರಿಸ್ಥಿತಿ, ಪರಿಹಾರ: ಟ್ರಂಪ್-ಮೋದಿ ಚರ್ಚೆ

Last Updated 4 ಏಪ್ರಿಲ್ 2020, 20:00 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ಸೋಂಕಿನಿಂದ ಉದ್ಭವಿಸಿರುವ ಪರಿಸ್ಥಿತಿ ಮತ್ತುಅದರ ಪರಿಹಾರ ಕ್ರಮಗಳನ್ನು ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ದೂರವಾಣಿಯಲ್ಲಿ ಚರ್ಚಿಸಿದರು.

`ಉತ್ತಮ ಚರ್ಚೆ ನಡೆಯಿತು. ಕೋವಿಡ್ ವಿರುದ್ಧದ ಹೋರಾಟಕ್ಕೆ ಉಭಯ ರಾಷ್ಟ್ರಗಳ ಪೂರ್ಣ ಬಲವನ್ನು ಬಳಸಿಕೊಳ್ಳಲು ತೀರ್ಮಾನಿಸಿದೆವು’ ಎಂದು ಪ್ರಧಾನಿ ಮೋದಿ ಈ ಕುರಿತು ಟ್ವೀಟ್ ಮಾಡಿದ್ದಾರೆ.

ಕೋವಿಡ್‌ನಿಂದಾಗಿ ಇದುವರೆಗೂ ಅಮೆರಿಕದಲ್ಲಿ 7,100 ಜನರು ಸತ್ತಿದ್ದರೆ, ಭಾರತದಲ್ಲಿ 75 ಜನರು ಅಸುನೀಗಿದ್ದಾರೆ.

ವಿಡಿಯೊ ಕಾನ್ಫರೆನ್ಸ್: ‘ಪ್ರಧಾನಿ ನರೇಂದ್ರ ಮೋದಿ ಅವರುಇದೇ 8ರಂದು ಬುಧವಾರ ಸಂಸತ್ತಿನಉಭಯ ಸದನಗಳಲ್ಲಿನ
ಸದನದ ನಾಯಕರೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಂವಹನ ನಡೆಸಲಿದ್ದಾರೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಮಾಹಿತಿನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT