ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ-20 ಶೃಂಗಸಭೆ: ಪ್ರಧಾನಿ ಮೋದಿ ಭೇಟಿ ಮಾಡಿದ ಸೌದಿ ದೊರೆ

Last Updated 30 ನವೆಂಬರ್ 2018, 2:22 IST
ಅಕ್ಷರ ಗಾತ್ರ

ಬ್ಯೂನಸ್‌ ಐರಿಸ್‌ (ಅರ್ಜೆಂಟಿನಾ): ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಅರ್ಜೆಂಟಿನಾಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸೌದಿ ಅರೇಬಿಯಾದೊರೆಯನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.

ಆಹಾರ ಭದ್ರತೆ, ಬಂಡವಾಳ ಹೂಡಿಕೆ, ತಂತ್ರಜ್ಞಾನ, ನವೀಕೃತ ಇಂಧನ ಕುರಿತಾಗಿ ಮಾತುಕತೆ ನಡೆಸಿದರು ಎನ್ನಲಾಗಿದೆ.

ಸೌದಿ ಅರೇಬಿಯಾದ ದೊರೆ ಮೊಹಮ್ಮದ್‌ ಬಿನ್‌ ಸಲ್ಮಾನ್‌ ಅಲ್‌ ಸೌದ್‌ ಅವರನ್ನು ಭೇಟಿ ಮಾಡಿ ಉಭಯ ರಾಷ್ಟ್ರಗಳ ದ್ವಿಪಕ್ಷಿಯ ಸಂಬಂಧಗಳನ್ನು ಗಟ್ಟಿಗೊಳಿಸುವ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಸಂಸ್ಕೃತಿ, ಆರ್ಥಿಕ, ಇಂಧನ ಕ್ಷೇತ್ರದಲ್ಲಿ ಹೂಡಿಕೆ ಹಾಗೂವಿವಿಧ ಯೋಜನೆಗಳ ಅನುಷ್ಠಾನ ಕುರಿತು ಮಾತುಕತೆ ನಡೆಸಲಾಗಿದ್ದು, ಈ ಭೇಟಿ ಫಲಪ್ರದವಾಗಿದೆ ಎಂದುಮೋದಿ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT