ಭಾನುವಾರ, ಮಾರ್ಚ್ 29, 2020
19 °C

ಇಂದು ರಾತ್ರಿ 8ಕ್ಕೆ ದೇಶವನ್ನುದ್ದೇಶಿಸಿ ಮೋದಿ ಭಾಷಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಾ.24 ಮಂಗಳವಾರ) ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.  

ದೇಶವನ್ನಾವರಿಸಿರುವ ಕೊರೊನಾ ವೈರಸ್‌ ಭೀತಿಯ ಪ್ರಮುಖ ವಿಚಾರಗಳ ಕುರಿತು ಮೋದಿ ಈ ಭಾಷಣದಲ್ಲಿ ಮಾತನಾಡಲಿದ್ದಾರೆ. 

ದೇಶದಲ್ಲಿ 490ಕ್ಕೂ ಹೆಚ್ಚು ಕೊರೊನಾ ವೈರಸ್‌ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಮೋದಿ ಈ ಭಾಷಣಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ. 

ಸದ್ಯ ದೇಶದಲ್ಲಿ ಕೊರೊನಾ ವೈರಸ್‌ ಮಹಾಮಾರಿಯಿಂದಾಗಿ ಈ ವರೆಗೆ 9 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಕರ್ನಾಟಕದವರೂ ಒಬ್ಬರು. 

ಕಳೆದ ಗುರುವಾರವೂ ದೇಶವನ್ನುದ್ದೇಶಿ ಮಾತನಾಡಿದ್ದ ನರೇಂದ್ರ ಮೋದಿ ಅವರು, ಕೊರೊನಾ ವೈರಸ್‌ ವ್ಯಾಪಕಗೊಳ್ಳುವ ಸರಪಳಿಯನ್ನು ತುಂಡರಿಸಲು ದೇಶವ್ಯಾಪಿ ಜನತಾ ಕರ್ಫ್ಯೂ ಆಚರಿಸುವಂತೆ ಮನವಿ ಮಾಡಿದ್ದರು. ಅದರಂತೆ ಕಳೆದ ಭಾನುವಾರ ಇಡೀ ದೇಶ ಸ್ತಬ್ಧವಾಗಿತ್ತು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು