ಬುಧವಾರ, ಫೆಬ್ರವರಿ 19, 2020
18 °C

ಎರಡನೇ ಬಾರಿ ಪ್ರಧಾನಿಯಾದ ನಂತರ ಮಾಲ್ಡೀವ್ಸ್‌ ಪ್ರವಾಸ ಕೈಗೊಳ್ಳಲಿದ್ದಾರೆ ಮೋದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಎರಡನೇ ಬಾರಿ ಪ್ರಧಾನಿಯಾಗಿರುವ ನರೇಂದ್ರ ಮೋದಿ ಮಾಲ್ಡೀವ್ಸ್‌ಗೆ ಮೊದಲ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಸರ್ಕಾರದ ಮೂಲಗಳು ಹೇಳಿವೆ. 

ಮಾಲ್ಡೀವ್ಸ್  ಸ್ಥಳೀಯ ಸುದ್ದಿವಾಹಿನಿ ರಜ್ಜೀ ಟಿವಿ ಪ್ರಕಾರ, ಮೋದಿಯವರು ಜೂನ್ 7 ಮತ್ತು 8ರಂದು ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ.

2014ರಲ್ಲಿ ಪ್ರಧಾನಿಯಾದಾಗ ಮೋದಿ ಭೂತಾನ್‌ಗೆ ಮೊದಲ ಪ್ರವಾಸ ಕೈಗೊಂಡಿದ್ದರು. ದಕ್ಷಿಣ ಏಷ್ಯಾದಲ್ಲಿನ ವಿದೇಶ ನೀತಿಗಳಿಗೆ ಹೆಚ್ಚಿನ ಆದ್ಯತೆ ನೀಡಿ ಮೋದಿ ಭೂತಾನ್‌ನ್ನು ಆಯ್ಕೆ ಮಾಡಿಕೊಂಡಿದ್ದರು.

ಕಳೆದ ನವೆಂಬರ್‌ನಲ್ಲಿ ಮೋದಿ ಮಾಲ್ಡೀವ್ಸ್‌ಗೆ ಪ್ರವಾಸ ಹೋಗಿದ್ದು ಅಲ್ಲಿನ ಅಧ್ಯಕ್ಷ  ಇಬ್ರಾಹಿಂ ಮೊಹಮ್ಮದ್ ಸೊಲಿಹ್ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.     
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು