ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ನೆರವು; ಚೀನಾ ಅಧ್ಯಕ್ಷರಿಗೆ ಮೋದಿ ಪತ್ರ

Last Updated 9 ಫೆಬ್ರುವರಿ 2020, 13:18 IST
ಅಕ್ಷರ ಗಾತ್ರ

ನವದೆಹಲಿ: ಚೀನಾದಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕೊರೊನಾ ವೈರಸ್‌ 800ಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದ ಅಧ್ಯಕ್ಷರಿಗೆ ಪತ್ರ ಬರೆದು ಕೊರೊನಾ ವೈರಸ್ ವಿರುದ್ಧ ಹೋರಾಡಲು ಭಾರತ ನೆರವು ನೀಡುತ್ತದೆ ಎಂದು ತಿಳಿಸಿರುವುದಾಗಿ ಮೂಲಗಳು ತಿಳಿಸಿವೆ.

ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ಅವರಿಗೆ ಬರೆದ ಪತ್ರದಲ್ಲಿ, ಚೀನಾದಲ್ಲಿ ಈಗ ಎದುರಾಗಿರುವ ಪರಿಸ್ಥಿತಿಯನ್ನ ಎದುರಿಸಲು ಭಾರತ ನೆರವು ನೀಡುತ್ತದೆ. ಏಕಾಏಕಿ ಸಂಭವಿಸಿದ ಕೊರೊನಾ ವೈರಸ್‌ನ ದುರದೃಷ್ಟಕರ ಪ್ರಾಣಹಾನಿಗೆ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಇದರೊಂದಿಗೆ ಕೊರೊನಾ ವೈರಸ್‌ನ ತೀವ್ರ ಹೊಡೆತಕ್ಕೆ ಸಿಲುಕಿರುವ ಹುಬೆ ಪ್ರಾಂತ್ಯದಿಂದ ಈ ತಿಂಗಳ ಆರಂಭದಲ್ಲಿ ಭಾರತೀಯರನ್ನು ಸ್ಥಳಾಂತರಿಸಲು ನೆರವು ನೀಡಿದ ಚೀನಾ ಸರ್ಕಾರದ ಕಾರ್ಯಕ್ಕೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕರೊನಾ ವೈರಸ್ ಪತ್ತೆಗಾಗಿ ಭಾರತವು ಹಲವಾರು ವಿಮಾನ ನಿಲ್ದಾಣಗಳು, ಬಂದರುಗಳು ಮತ್ತು ನೇಪಾಳದ ಗಡಿ ಚೆಕ್‌ ಪಾಯಿಂಟ್‌ಗಳಲ್ಲಿ ಬೃಹತ್ ಸ್ಕ್ರೀನಿಂಗ್ ಸೌಲಭ್ಯಗಳನ್ನು ಇಟ್ಟಿದೆ. ಇನ್ನು ಕೇರಳದಲ್ಲಿ ಮೂವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿತ್ತು. ರಾಜ್ಯದಲ್ಲಿ ಹಲವು ಕುಟುಂಬಗಳನ್ನು ನಿರ್ಬಂಧಿಸಲಾಗಿದ್ದು, ಪ್ರತಿದಿನವೂ ಅವರ ಆರೋಗ್ಯದ ಮೇಲ್ವಿಚಾರಣೆ ನಡೆಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT