ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಧ್ವಿ ಪ್ರಜ್ಞಾ ಸಿಂಗ್‌ರನ್ನು ಕ್ಷಮಿಸುವುದಿಲ್ಲ: ಪ್ರಧಾನಿ ಮೋದಿ

ಗೋಡ್ಸೆ ದೇಶಭಕ್ತ ಎಂಬ ಹೇಳಿಕೆಗೆ ಪ್ರತಿಕ್ರಿಯೆ
Last Updated 17 ಮೇ 2019, 10:55 IST
ಅಕ್ಷರ ಗಾತ್ರ

ನವದೆಹಲಿ: ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತಎಂದು ಭೋಪಾಲ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್‌ ಬಣ್ಣಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ.

ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನದ ಹಿನ್ನೆಲೆಯಲ್ಲಿ ‘ನ್ಯೂಸ್ 24’ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿಪ್ರಧಾನಿಯು ಪ್ರಜ್ಞಾ ಹೇಳಿಕೆಯನ್ನು ಖಂಡಿಸಿದ್ದು, ಅಂತಹ ಹೇಳಿಕೆಗಳು ಸಮಾಜಕ್ಕೆ ಹಾನಿಕರ ಎಂದಿದ್ದಾರೆ.

‘ಗಾಂಧಿ ಅಥವಾ ನಾಥೂರಾಮ್ ಗೋಡ್ಸೆ ಕುರಿತು ಪ್ರಜ್ಞಾ ನೀಡಿರುವ ಹೇಳಿಕೆ ಕೆಟ್ಟ ಅಭಿರುಚಿಯಿಂದ ಕೂಡಿದ್ದಲ್ಲದೆ ಸಮಾಜಕ್ಕೆ ಹಾನಿಕಾರಕ. ಹೇಳಿಕೆ ಕುರಿತು ಪ್ರಜ್ಞಾ ಕ್ಷಮೆಯಾಚಿಸಿದ್ದರೂ ಆಕೆಯನ್ನು ಪೂರ್ತಿಯಾಗಿ ಕ್ಷಮಿಸುವುದು ನನ್ನಿಂದ ಸಾಧ್ಯವಿಲ್ಲ’ ಎಂದು ಮೋದಿ ಹೇಳಿದ್ದಾರೆ.

ಗೋಡ್ಸೆ ಕುರಿತುಸಾಧ್ವಿ ಪ್ರಜ್ಞಾ ಸಿಂಗ್‌ ಹೇಳಿಕೆ, ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಟ್ವೀಟ್,ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ವಿವಾದಕ್ಕೀಡಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಗೋಡ್ಸೆ ಕುರಿತು ಈ ನಾಯಕರ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎಂದಿದ್ದಾರೆ. ಇಂತಹ ಹೇಳಿಕೆಗಳು ಪಕ್ಷದಸಿದ್ಧಾಂತಕ್ಕೆ ವಿರುದ್ಧವಾದವು ಎಂದಿರುವ ಶಾ,ಈ ವಿಷಯಕ್ಕೆ ಸಂಬಂಧಿಸಿ ಮುಂದಿನ ಕ್ರಮ ಕೈಗೊಳ್ಳುವುದಕ್ಕಾಗಿ 10 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಪಕ್ಷದ ಶಿಸ್ತು ಸಮಿತಿಗೆ ಸೂಚಿಸಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT