ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ

ಅಕ್ಷರ ಗಾತ್ರ

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ.

ಲಾಕ್‌ಡೌನ್‌ನ ಮೂರನೇ ಹಂತ ಕೊನೆಯಾಗುತ್ತಿರುವ ಹೊತ್ತಿನಲ್ಲಿ ಮುಖ್ಯಮಂತ್ರಿಗಳ ಜತೆಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ವಿಡಿಯೊ ಸಂವಾದ ನಡೆಸಿ ಮುಖ್ಯಮಂತ್ರಿಗಳಿಂದ ಅಭಿಪ್ರಾಯ ಸಂಗ್ರಹಿಸಿದ್ದರು. ಕಂಟೈನ್‌ಮೆಂಟ್‌ ವಲಯ ಬಿಟ್ಟು ಉಳಿದ ಭಾಗಗಳಲ್ಲಿ ಆರ್ಥಿಕ ಚಟುವಟಿಕೆ ಆರಂಭಿಸಲು ಅವಕಾಶ ನೀಡುವಂತೆ ಅಭಿಪ್ರಾಯ ವ್ಯಕ್ತವಾಗಿತ್ತು.

ಮೇ 17ರ ನಂತರದಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ನಡೆದ ಸುಮಾರು 6 ಗಂಟೆಗಳ ಚರ್ಚೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ನಿರ್ಬಂಧಗಳನ್ನು ಕಡಿಮೆ ಮಾಡಿ ಲಾಕ್‌ಡೌನ್‌ ಮುಂದುವರಿಸುವ ಸುಳಿವು ನೀಡಿದ್ದಾರೆ.

'ಮೊದಲ ಹಂತದ ಅಗತ್ಯವಿದ್ದ ಕ್ರಮಗಳು ಎರಡನೇ ಹಂತದಲ್ಲಿ ಬೇಕಿರಲಿಲ್ಲ, ಹಾಗೆಯೇ ಮೂರನೇ ಹಂತದಲ್ಲಿ ಕೈಗೊಂಡಿರುವ ಕ್ರಮಗಳು ನಾಲ್ಕನೇ ಹಂತದಲ್ಲಿ ಬೇಕಿರುವುದಿಲ್ಲ' ಎಂದು ಪ್ರಧಾನಿ ಅಭಿಪ್ರಾಯ ವ್ಯಕ್ತಪಡಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಕೋವಿಡ್‌–19ನಿಂದ ಹೆಚ್ಚು ಪ್ರಭಾವಕ್ಕೆ ಒಳಗಾಗಿರುವ, ಕೆಂಪು ವಲಯವಾಗಿ ಗುರುತಿಸಲಾಗಿರುವ ಭಾಗಗಳಲ್ಲಿ ಸಾರ್ವಜನಿಕ ಸಾರಿಗೆ ಹಾಗೂ ರಾತ್ರಿ ವೇಳೆ ಕರ್ಫ್ಯೂ ರೀತಿಯ ಕ್ರಮಗಳು ಮುಂದುವರಿಯುವ ಸಾಧ್ಯತೆ ಇದೆ. ಪ್ರಸ್ತುತ ಇರುವ ಕ್ರಮಗಳಲ್ಲಿ ಅಗತ್ಯವಿರುವ ಬದಲಾವಣೆಗಳ ಬಗ್ಗೆ ರಾಜ್ಯಗಳು ಮೇ 15ರೊಳಗೆ ಸಲಹೆಗಳನ್ನು ಕಳುಹಿಸುವಂತೆ ಕೇಳಲಾಗಿದೆ.

ಮಾರ್ಚ್‌ 25ರಿಂದ ದೇಶದಾದ್ಯಂತ ಲಾಕ್‌ಡೌನ್‌ ಜಾರಿಗೆ ತರಲಾಗಿದೆ.ದೇಶದಲ್ಲಿ ಒಟ್ಟು ಕೊರೊನಾಸೋಂಕಿತರ ಸಂಖ್ಯೆ 70,768ಕ್ಕೆ ಏರಿಕೆಯಾಗಿದೆ. ಈ ಪೈಕಿ2,294 ಮಂದಿ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT