ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿಯಲ್ಲಿ ಸಂಘರ್ಷ: ಜೂನ್‌ 19ಕ್ಕೆ ಸರ್ವಪಕ್ಷ ಸಭೆ

Last Updated 17 ಜೂನ್ 2020, 10:14 IST
ಅಕ್ಷರ ಗಾತ್ರ

ನವದೆಹಲಿ: ಗಾಲ್ವನ್‌ ಕಣಿವೆಯಲ್ಲಿ ಚೀನಾ ಜೊತೆಗಿನ ಸಂಘರ್ಷದಲ್ಲಿ 20 ಹುತಾತ್ಮರಾದ ಬಗ್ಗೆ ಮೌನ ಮುರಿಯಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್‌ 19ರಂದು ಇದೇ ವಿಷಯ ಕುರಿತು ಚರ್ಚಿಸಲು ಸರ್ವಪಕ್ಷಗಳ ಸಭೆ ಕರೆದಿದ್ದಾರೆ.

ಅಂದು ಸಂಜೆ 5ಕ್ಕೆ ನಡೆಯುವ ಸಭೆಯಲ್ಲಿ ವಿವಿಧ ಪಕ್ಷಗಳ ಅಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಗಡಿಯಲ್ಲಿ ಉದ್ಭವಿಸಿರುವ ಸಂಘರ್ಷವನ್ನು ನಿರ್ವಹಿಸಿದ ಕೇಂದ್ರದ ನಡೆಯನ್ನು ವಿರೋಧ ಪಕ್ಷಗಳು ಅದರಲ್ಲೂ ವಿಶೇಷವಾಗಿ ಕಾಂಗ್ರೆಸ್‌ ಕಟುವಾಗಿ ಟೀಕಿಸುತ್ತಲೇ ಬಂದಿದೆ.

ಜೂನ್‌ 21ರಂದು ದೇಶವನ್ನು ಉದ್ಧೇಶಿಸಿ ಪ್ರಧಾನಿ ಭಾಷಣ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಕೇಂದ್ರ ಸರ್ಕಾರದ ಮೂಲಗಳು ಇದನ್ನು ಖಚಿತಪಡಿಸಿಲ್ಲ. ಜೂನ್‌ 21ರಂದು ಅಂತರರಾಷ್ಟ್ರೀಯ ಯೋಗ ದಿನ. ಈ ದಿನಾಚರಣೆ ಸಂದರ್ಭದಲ್ಲಿ ಸಾಮಾನ್ಯವಾಗಿ ಪ್ರಧಾನಿ ದೇಶವನ್ನುದ್ದೇಶಿಸಿ ಮಾತನಾಡುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT