ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಗ್ಗೂಡಿ ಜಯಿಸೋಣ: ಡೊನಾಲ್ಡ್ ಟ್ರಂಪ್‌ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್

Last Updated 9 ಏಪ್ರಿಲ್ 2020, 20:20 IST
ಅಕ್ಷರ ಗಾತ್ರ

ನವದೆಹಲಿ: ‘ನಾವು ಇದನ್ನು ಒಗ್ಗೂಡಿ ಜಯಿಸೋಣ. ಕೋವಿಡ್–19 ಪಿಡುಗಿನ ವಿರುದ್ಧ ಮಾನವಕುಲ ನಡೆಸುತ್ತಿರುವ ಹೋರಾಟದಲ್ಲಿ ಭಾರತ ಸಾಧ್ಯವಾದಷ್ಟೂ ಸಹಾಯ ಮಾಡುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಟ್ವೀಟ್ ಮಾಡಿದ್ದಾರೆ.

ಮಲೇರಿಯಾ ಲಸಿಕೆ ಹೈಡ್ರಾಕ್ಸಿಕ್ಲೊರೊಕ್ವಿನ್ ರಫ್ತು ಮಾಡಿದ್ದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಅವರು ಸಲ್ಲಿಸಿದ ಧನ್ಯವಾದಕ್ಕೆ ಪ್ರತಿಯಾಗಿ ಅವರು ಈ ಟ್ವೀಟ್ ಮಾಡಿದ್ದಾರೆ.

‘ಇಂತಹ ಸಂದರ್ಭಗಳು ಸ್ನೇಹಿತರನ್ನು ಮತ್ತಷ್ಟು ಒಗ್ಗೂಡಿಸುತ್ತದೆ.ಭಾರತ–ಅಮೆರಿಕದ ಬಾಂಧವ್ಯ ಸದೃಢವಾಗಿದೆ’ ಎಂದೂ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT