ಸೋಮವಾರ, ಮಾರ್ಚ್ 30, 2020
19 °C

ಎಷ್ಟೇ ಒತ್ತಡ ಬಂದರೂ ಸಿಎಎ, 370 ವಿಧಿ ರದ್ದತಿಯಿಂದ ಹಿಂದೆ ಸರಿಯುವ ಮಾತಿಲ್ಲ: ಮೋದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾರಾಣಸಿ: ‘ಎಷ್ಟೇ ಒತ್ತಡಗಳು ಬಂದರೂ ಸರಿಯೇ, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರುವ ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370 ವಿಧಿ ರದ್ದು ಮಾಡಿದ ನಿರ್ಧಾರದ ಪುನರ್‌ ಪರಿಶೀಲನೆ ಮಾತೇ ಇಲ್ಲ. ನಮ್ಮ ನಿರ್ಧಾರಕ್ಕೆ ನಾವು ಅಚಲ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 

ತಾವು ಪ್ರತಿನಿಧಿಸುವ ಉತ್ತರ ಪ್ರದೇಶದ ವಾರಾಣಸಿ ಲೋಕಸಭೆ ಕ್ಷೇತ್ರಕ್ಕೆ ಇಂದು ಭೇಟಿ ನೀಡಿದ್ದ ಅವರು, ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ‘ ಸಂವಿಧಾನದ 370ನೇ ವಿಧಿ ರದ್ದು ಮಾಡುವುದರಿಲಿ, ಸಿಎಎ ಜಾರಿಗೆ ತರುವುದಿರಲಿ... ಇವುಗಳಿಗಾಗಿ ದೇಶ ಈ ವರೆಗೆ ಕಾದಿದೆ,’ ಎಂದು ಹೇಳಿದರು. 

‘ದೇಶದ ಹಿತಕ್ಕಾಗಿ ಈ ನಿರ್ಧಾರಗಳು ಅತ್ಯಗತ್ಯ. ಎಲ್ಲ ಕಡೆಗಳಿಂದ ಒತ್ತಡಗಳು ಬಂದರೂ ನಮ್ಮ ನಿರ್ಧಾರಕ್ಕೆ ನಾವು ಬದ್ಧ. ಈ ನಿಟ್ಟಿನಲ್ಲಿ ನಾವು ಮುಂದುವರಿಯುತ್ತೇವೆ,’ ಎಂದು ಅವರು ಸ್ಪಷ್ಟವಾಗಿ ತಿಳಿಸಿದರು. 

ಇನ್ನು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ಕುರಿತು ಮಾತನಾಡಿದ ಅವರು, ‘ಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್‌ ರಚನೆ ಮಾಡಲಾಗಿದೆ. ನಿರ್ಮಾಣ ಕಾರ್ಯ ಕ್ಷಿಪ್ರಗತಿಯಲ್ಲಿ ನಡೆಯಲಿದೆ’ ಎಂದೂ ಅವರು ಭರವಸೆ ನೀಡಿದರು.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು