ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ವಿಶೇಷ ವಿಮಾನ: ₹255 ಕೋಟಿ ವೆಚ್ಚ

Last Updated 21 ನವೆಂಬರ್ 2019, 20:00 IST
ಅಕ್ಷರ ಗಾತ್ರ

ನವದೆಹಲಿ: ಕಳೆದ ಮೂರು ವರ್ಷಗಳ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳಿಗೆ ಬಳಸಿದ ವಿಶೇಷ ವಿಮಾನಗಳಿಗೆ ₹255 ಕೋಟಿ ವೆಚ್ಚ ಮಾಡಲಾಗಿದೆ ಎಂದು ರಾಜ್ಯಸಭೆಗೆ ಸರ್ಕಾರ ತಿಳಿಸಿದೆ.

ವಿದೇಶಾಂಗ ವ್ಯವಹಾರಗಳ ರಾಜ್ಯಸಚಿವ ವಿ.ಮುರಳೀಧರನ್ ಅವರು ನೀಡಿದ ಲಿಖಿತ ಉತ್ತರದಲ್ಲಿ, 2016–17ರ ಅವಧಿಯಲ್ಲಿ ₹76.27 ಕೋಟಿ, 2017–18ರ ಅವಧಿಯಲ್ಲಿ ₹99.32 ಕೋಟಿ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು. 2019–20ರ ಅವಧಿಯ ವೆಚ್ಚದ ಮಾಹಿತಿ ಲಭ್ಯವಾಗಿಲ್ಲ.

ದೇಶದೊಳಗೆ ಅಧಿಕೃತ ಪ್ರವಾಸ ಮಾಡುವಾಗ, ಭಾರತೀಯ ವಾಯುಪಡೆಯ ವಿಮಾನ ಅಥವಾ ಹೆಲಿಕಾಪ್ಟರ್‌ಗಳನ್ನುಪ್ರಧಾನಿ ಉಚಿತವಾಗಿ ಬಳಕೆ ಮಾಡಿಕೊಳ್ಳಬಹುದು ಎಂದು ಅವರು ಉತ್ತರಿಸಿದರು.

ಹಾಟ್‌ಲೈನ್ ಸೌಲಭ್ಯಕ್ಕಾಗಿ 2016–17ರಲ್ಲಿ ₹2.24 ಕೋಟಿ, 2017–18ರಲ್ಲಿ ₹58 ಲಕ್ಷ ವೆಚ್ಚ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT