ಶನಿವಾರ, ಮಾರ್ಚ್ 6, 2021
32 °C

ತಿರುಪತಿ: ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿರುಪತಿ: ಎರಡು ದಿನಗಳ ಶ್ರೀಲಂಕಾ ಮತ್ತು ಮಾಲ್ಡೀವ್ಸ್ ಭೇಟಿಯ ನಂತರ ಪ್ರಧಾನಿ ನರೇಂದ್ರ ಮೋದಿ ಆಂಧ್ರ ಪ್ರದೇಶ ತಲುಪಿದ್ದು ಭಾನುವಾರ ರಾತ್ರಿ ತಿರುಪತಿಯ ತಿರುಮಲ ದೇವಸ್ಥಾನದಲ್ಲಿ ತಿಮ್ಮಪ್ಪನ ದರ್ಶನ ಪಡೆದರು. ಆಂಧ್ರ ಪ್ರದೇಶದ ನೂತನ ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ ಜತೆಗಿದ್ದರು.

ಆಂಧ್ರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಜಗನ್ ಮೋಹನ್ ರೆಡ್ಡಿಯವರಿಗೆ ಶುಭಕೋರಿದ ಅವರು ಕೇಂದ್ರ ಸರ್ಕಾರ ರಾಜ್ಯದ ಜನರ ಹಿತಾಸಕ್ತಿಯನ್ನು ಕಾಪಾಡಲಿದೆ ಎಂಬ ಭರವಸೆಯನ್ನು ನೀಡಿದ್ದಾರೆ. ಆಂಧ್ರ ಪ್ರದೇಶದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಜಗನ್ ಶ್ರಮಿಸಲಿದ್ದಾರೆ ಎಂದು ಅವರು ಆಶಯ ವ್ಯಕ್ತಪಡಿಸಿದರು.

ಇದನ್ನು ಓದಿ: ಪ್ರಧಾನಿ ಮೋದಿ ಶ್ರೀಲಂಕಾ ಭೇಟಿ

ಶ್ರೀಲಂಕಾದಲ್ಲಿ ದಾಳಿಗೊಳಗಾದ ಚರ್ಚ್‌ ಭೇಟಿ ನೀಡಿ ಮೃತರಿಗೆ ಶ್ರದ್ಧಾಂಜಲಿಯನ್ನು ಅರ್ಪಿಸಿ ಭಯೋತ್ಪಾದನೆ ವಿರುದ್ಧ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಶ್ರೀಲಂಕಾವು ಈ ಹೇಡಿಗಳ ಕೃತ್ಯಗಳಿಗೆ ಜಗ್ಗುವುದಿಲ್ಲ ಮತ್ತೊಮ್ಮೆ  ಉದಯಿಸಿ ಬರಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಶ್ರೀಲಂಕಾ–ಮಾಲ್ಡೀವ್ಸ್‌ಗೆ ಮೋದಿ ಪ್ರವಾಸ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು