ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿ ಸಂಘರ್ಷದ ಕುರಿತು ಇಂದು ಪ್ರಧಾನಿ ಮೋದಿ ಸರ್ವಪಕ್ಷ ಸಭೆ

Last Updated 19 ಜೂನ್ 2020, 8:35 IST
ಅಕ್ಷರ ಗಾತ್ರ

ನವದೆಹಲಿ: ಲಡಾಕ್‌ನ ಗಾಲ್ವಾನ್‌ ಕಣಿವೆಯಲ್ಲಿ ಸೋಮವಾರ ನಡೆದ ಸಂಘರ್ಷಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆದಿರುವ ಸರ್ವಪಕ್ಷ ಸಭೆ ಶುಕ್ರವಾರ ಸಂಜೆ ನಡೆಲಿದೆ.

ಈ ಸಭೆಯಲ್ಲಿ 20 ಪಕ್ಷಗಳು ಭಾಗವಹಿಸುತ್ತಿವೆ. ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌. ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ವಿಡಿಯೊ ಕಾನ್ಫರೆನ್ಸ್‌ ಮೂಲಕ ಭಾಗವಹಿಸಲಿದ್ದಾರೆ. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಪ್ರಧಾನಿ ಅವರ ಪರವಾಗಿ ಪ್ರಮುಖ ನಾಯಕರನ್ನು ಸಭೆಗೆ ಆಹ್ವಾನಿಸಿದ್ದಾರೆ.

ಸಂಸತ್‌ನಲ್ಲಿ ಐದು ಸದಸ್ಯರಿಗಿಂತಲೂ ಹೆಚ್ಚಿನ ಬಲವಿರುವ ಪಕ್ಷಗಳನ್ನು ಈ ಸಭೆಗೆ ಆಹ್ವಾನಿಸಲಾಗಿದೆ.
ಅಂಗೀಕೃತ ರಾಷ್ಟ್ರೀಯ ಪಕ್ಷಗಳು, ಸಂಸತ್‌ನಲ್ಲಿ ಐವರು ಸಂಸದರನ್ನು ಹೊಂದಿರುವ ಪಕ್ಷಗಳು, ಕೇಂದ್ರ ಸಂಪುಟ ಪಾಲುದಾರ ಪಕ್ಷಗಳು, ಈಶಾನ್ಯ ರಾಜ್ಯದ ಪ್ರಮುಖ ಪಕ್ಷಗಳನ್ನು ಸಭೆಗೆ ಆಹ್ವಾನಿಸಲಾಗಿದೆ.

ಆದರೆ, ಈ ಸಭೆಗೆ ದೆಹಲಿ ಸರ್ಕಾರ ಹೊಂದಿರುವ ಎಎಪಿ ಮತ್ತು ಬಿಹಾರದ ಲಾಲು ಪ್ರಸಾದ್‌ ಯಾದವ್‌ ನೇತೃತ್ವದ ಆರ್‌ಜೆಡಿಯನ್ನು ಆಹ್ವಾನಿಸದೇ ಇರುವುದಕ್ಕೆ ಆಕ್ಷೇಪಗಳೂ ವ್ಯಕ್ತವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT