ಶನಿವಾರ, ಜೂನ್ 6, 2020
27 °C

₹20 ಲಕ್ಷ ಕೋಟಿ ಪ್ಯಾಕೇಜ್‌ ಎಂಬುದು ಕ್ರೂರ ವ್ಯಂಗ್ಯವಾಗಿ ಮಾರ್ಪಟ್ಟಿದೆ: ಸೋನಿಯಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೊರೊನಾ ವೈರಸ್‌ ಅನ್ನು ನಿಭಾಯಿಸಿದ ರೀತಿಯ ಕುರಿತು ಸೋನಿಯಾ ಗಾಂಧಿ ಅವರು ಶುಕ್ರವಾರ ಕೇಂದ್ರ ಸರ್ಕಾರದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಕೇಂದ್ರವು ಒಕ್ಕೂಟ ವ್ಯವಸ್ಥೆಯನ್ನೇ ಮರೆತಿದೆ. ಪ್ರಜಾಸತ್ತಾತ್ಮಕವಾಗಿರುವುದನ್ನೇ ತ್ಯಜಿಸಿದೆ ಎಂದು ಆರೋಪಿಸಿದ್ದಾರೆ. 

ಲಾಕ್‌ಡೌನ್‌ನಿಂದಾಗಿ ವಲಸಿಗರು ಎದುರಿಸುತ್ತಿರುವ ದುಃಸ್ಥಿತಿಯ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ವಿರೋಧ ಪಕ್ಷಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ‘ಲಾಕ್‌ಡೌನ್‌ಗಳ ಮಾನದಂಡಗಳ ಬಗ್ಗೆ ಸರ್ಕಾರದಲ್ಲಿ ಅನಿಶ್ಚಿತತೆ ತಲೆದೋರಿದೆ. ಮತ್ತು ಅದನ್ನು ಅಂತ್ಯಗೊಳಿಸುವ ಕುರಿತು ಯಾವುದೇ ತಂತ್ರಗಳನ್ನೂ ರೂಪಿಸಿಲ್ಲ,’ ಎಂದು ಅವರು ಹೇಳಿದ್ದಾರೆ. 

ವಲಸಿಗರೂ ಸೇರಿದಂತೆ ದೇಶದ ಅರ್ಧದಷ್ಟಿರುವ 13 ಕೋಟಿ ಬಡ ಕುಟುಂಬಗಳನ್ನು ಕೇಂದ್ರ ಸರ್ಕಾರ ಅತ್ಯಂತ ಕ್ರೂರವಾಗಿ ನಿರ್ಲಕ್ಷಿಸಿದೆ ಎಂದು ಅವರು ಆರೋಪಿಸಿದ್ದಾರೆ. 

‘ಪ್ರಧಾನ ಮಂತ್ರಿ ಘೋಷಿಸಿದ ₹20 ಲಕ್ಷ ಕೋಟಿ ರೂ. ಪ್ಯಾಕೇಜ್ ದೇಶದಲ್ಲಿ ಕ್ರೂರ ವ್ಯಂಗ್ಯವಾಗಿ ಪರಿಣಮಿಸಿದೆ’ ಎಂದು ಅವರು ಹೇಳಿದರು.  

‘ಪ್ರಧಾನ ಮಂತ್ರಿ ಘೋಷಿಸಿದ ₹20 ಲಕ್ಷ ಕೋಟಿ ರೂ. ಪ್ಯಾಕೇಜ್ ದೇಶದಲ್ಲಿ ಕ್ರೂರ ವ್ಯಂಗ್ಯವಾಗಿ ಪರಿಣಮಿಸಿದೆ’ ಎಂದು ಅವರು ಹೇಳಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು