ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದಿತ್ಯನಾಥ್‌ ವಿರುದ್ಧ ಆಕ್ಷೇಪಾರ್ಹ ಟೀಕೆ ಮಾಡಿದ ಪತ್ರಕರ್ತನ ಬಂಧನ

Last Updated 9 ಜೂನ್ 2019, 15:54 IST
ಅಕ್ಷರ ಗಾತ್ರ

ಲಖನೌ(ಉತ್ತರ ಪ್ರದೇಶ):ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಕುರಿತು ಆಕ್ಷೇಪಾರ್ಹ ಟೀಕೆಗಳನ್ನು ಮಾಡಿ, ಸಾಮಾಜಿಕ ಜಾಲ ತಾಣಗಳಲ್ಲಿ ವದಂತಿ ಹಬ್ಬಿಸಿದಸಂಬಂಧ ಉತ್ತರ ಪ್ರದೇಶ ಪೊಲೀಸರು ಪತ್ರಕರ್ತನನ್ನು ಶನಿವಾರ ಸಂಜೆ ಬಂಧಿಸಿದ್ದಾರೆ.

ಈ ಸಂಬಂಧ ಇಲ್ಲಿನ ಹಜರತ್‌ಗಂಜ್‌ ಪೊಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾಖಲೆಗಳ ಪರಿಶೀಲನೆ ಮತ್ತು ಆ ವ್ಯಕ್ತಿಯ ಸಮಗ್ರ ವಿಚಾರಣೆ ಬಳಿಕ ಆತ ಅಪರಾಧ ಎಸಗಿರುಗುವುದು ತಿಳಿದುಬಂದಿದ್ದರಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತನ ವಿರುದ್ಧ ಐಪಿಸಿ 500(ಮಾನನಷ್ಟ), ಮಹಿತಿ ಮತ್ತು ತಂತ್ರಜ್ಞಾನ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾದೆ.

ಬಂಧಿತ ಆರೋಪಿ ಪ್ರಶಾಂತ್‌ ಕನೋಜಿ ದೆಹಲಿಯಲ್ಲಿ ನೆಲೆಸಿದ್ದಾರೆ. ಆದಿತ್ಯನಾಥ್‌ ಅವರಕುರಿತಾಗಿ ಮಹಿಳೆಯೊಬ್ಬರು ಮಾತನಾಡಿರುವ ವಿಡಿಯೊವನ್ನು ಆಕ್ಷೇಪಾರ್ಹ ಟೀಕೆಗಳೊಂದಿಗೆ ಟ್ವೀಟ್‌ ಮಾಡಿದ್ದರು ಎಂದು ಎಎನ್‌ಐ ವರದಿಮಾಡಿದೆ.

ಪ್ರಶಾಂತ್‌ ಕನೋಜಿ ಪತ್ರಕರ್ತ ಹಾಗೂ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ಎಂದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT