ಭಾನುವಾರ, ಜನವರಿ 26, 2020
28 °C

ಚೆನ್ನೈ: ಪ್ರತಿಭಟನೆ ಹತ್ತಿಕ್ಕಿದ ಪೊಲೀಸರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ: ಇಲ್ಲಿನ ಮದ್ರಾಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಎರಡು ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ಪೊಲೀಸರು ಬಲವಂತವಾಗಿ ಕೊನೆಗೊಳಿಸಿದ್ದಾರೆ.  

ಬುಧವಾರ ರಾತ್ರಿ ವಿಶ್ವವಿದ್ಯಾಲಯದ ಆವರಣ ಪ್ರವೇಶಿಸಿದ ಪೊಲೀಸರು, ಪ್ರತಿಭಟನನಿರತ ವಿದ್ಯಾರ್ಥಿಗಳನ್ನು ಒತ್ತಾಯಪೂರ್ವಕವಾಗಿ ಬಸ್‌ಗಳಲ್ಲಿ ತುಂಬಿ, ಜಾಗ ಖಾಲಿ ಮಾಡಿಸಿದರು. 

ಪೊಲೀಸರು, ವಿಶ್ವವಿದ್ಯಾಲಯದ ಆಡಳಿತ ವರ್ಗದ ಎಚ್ಚರಿಕೆಯನ್ನು ಲೆಕ್ಕಿಸದೆ ಮಂಗಳವಾರ ಪ್ರತಿಭಟನೆ ಆರಂಭಿಸಿದ್ದ ವಿದ್ಯಾರ್ಥಿಗಳು, ಕ್ಯಾಂಪಸ್‌ ಬಿಟ್ಟು ಕದಲಿರಲಿಲ್ಲ. 

ಮಕ್ಕಳ್ ನೀಧಿ ಮಯ್ಯಂ (ಎಂಎನ್‌ಎಂ) ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಅವರು ಗುರುವಾರ ಬೆಳಿಗ್ಗೆ ವಿದ್ಯಾರ್ಥಿಗಳ ಭೇಟಿಗೆ ಯತ್ನಿಸಿದರು. ಆದರೆ ಕ್ಯಾಂಪಸ್ ಪ್ರವೇಶಿಸಲು ಸಾಧ್ಯವಾಗದೇ ಗೇಟ್‌ನಲ್ಲಿಯೇ ನಿಂತು ಮಾತನಾಡಿದರು. 

 
ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು