ಗುರುವಾರ , ಏಪ್ರಿಲ್ 2, 2020
19 °C

ದೆಹಲಿ: ಶಾಹೀನ್‌ ಬಾಗ್ ಪ್ರತಿಭಟನಾಕಾರರ ತೆರವುಗೊಳಿಸಿದ ಪೊಲೀಸರು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಶಾಹೀನ್ ಬಾಗ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಕೊರೊನಾ ವೈರಸ್ ಸೋಂಕು (ಕೋವಿಡ್–19) ವ್ಯಾಪಕಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ತೆರವುಗೊಳಿಸಿದ್ದಾರೆ.

ಈ ವೇಳೆ, 9 ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಶಾಹೀನ್‌ ಬಾಗ್‌ನಲ್ಲಿ ಮಹಿಳಾ ಪ್ರತಿಭಟನಾಕಾರರು ಕಳೆದ ಮೂರು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದರು.

ಲಾಕ್‌ಡೌನ್ ಹಿನ್ನೆಲೆಯಲ್ಲಿ ಪ್ರತಿಭಟನೆ ತೆರವುಗೊಳಿಸುವಂತೆ ಪ್ರತಿಭಟನಾಕಾರರಲ್ಲಿ ಮನವಿ ಮಾಡಲಾಯಿತು. ಆದರೂ ಅವರು ಸಮ್ಮತಿಸಲಿಲ್ಲ. ಬಳಿಕ ಬಲವಂತವಾಗಿ ತೆರವುಗೊಳಿಸಲಾಯಿತು ಎಂದು ಆಗ್ನೇಯ ದೆಹಲಿ ಡಿಸಿಪಿ ಆರ್‌.ಪಿ. ಮೀನಾ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು