ಶುಕ್ರವಾರ, ಡಿಸೆಂಬರ್ 6, 2019
19 °C

ಶ್ರೀನಗರದಲ್ಲಿ ಎನ್‌ಕೌಂಟರ್‌: ಮೂವರು ಉಗ್ರರ ಹತ್ಯೆ, ಕಾನ್‌ಸ್ಟೆಬಲ್‌ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಗರ: ಇಲ್ಲಿನ ಫತೇ ಕದಲ್‌ ಪ್ರದೇಶದಲ್ಲಿ ಯೋಧರು ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. 

ಘಟನೆಯಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್‌ ಒಬ್ಬರು ಮೃತಪಟ್ಟಿದ್ದಾರೆ. ಮನೆಯೊಂದರಲ್ಲಿ ಮೂವರು ಉಗ್ರರು ಅಡಗಿ ಕುಳಿತಿರುವ ಬಗ್ಗೆ ಖಚಿತ  ಮಾಹಿತಿ ಪಡೆದ ಪೊಲೀಸರು ಸೇನಾ ಯೋಧರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿದ್ದಾರೆ.

ಉಗ್ರರು ಅಡಗಿದ್ದ ಮನೆಯನ್ನು ಯೋಧರು ಮತ್ತು ಪೊಲೀಸರು ಸುತ್ತುವರಿದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿ ದಾಳಿ ನಡೆಸಿದ ಯೋಧರು ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. 

ಈ ಪ್ರದೇಶದಲ್ಲಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. 

ಉಗ್ರರು ಯಾವ ಸಂಘಟನೆಗೆ ಸೇರಿದವರು ಹಾಗೂ ಎಷ್ಟು ಜನ ಇದ್ದರು ಎಂಬ ಮಾಹಿತಿ ಲಭ್ಯವಾಗಿಲ್ಲ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.  

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು