ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಸಬಲೀಕರಣಕ್ಕೆ ಕೇಂದ್ರದಿಂದ ಕರಡು ನೀತಿ

ಶಿಕ್ಷಣ, ಆಹಾರ ಭದ್ರತೆ, ಪೌಷ್ಠಿಕತೆಗೆ ಆದ್ಯತೆ
Last Updated 29 ಜೂನ್ 2019, 19:03 IST
ಅಕ್ಷರ ಗಾತ್ರ

ನವದೆಹಲಿ: ಮಹಿಳೆಯರ ಸಬಲೀಕರಣಕ್ಕಾಗಿ ರಾಷ್ಟ್ರೀಯ ನೀತಿ ರೂಪಿಸಲು ಮುಂದಾಗಿರುವ ಸರ್ಕಾರ ನೀತಿಯ ಕರಡು ಸಿದ್ಧಪಡಿಸಿದೆ. ಕರಡು ನೀತಿಯಲ್ಲಿ ಹೆಣ್ಣು ಮಕ್ಕಳಶಿಕ್ಷಣ, ಆಹಾರ ಭದ್ರತೆ, ಪೌಷ್ಠಿಕತೆಗೆ ಆದ್ಯತೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಲಹೆ ಸೂಚನೆಗಳನ್ನು ಸ್ವೀಕರಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಈ ಕರಡು ನೀತಿ ರಚಿಸಿದೆ ಎಂದು ಮೂಲಗಳು ತಿಳಿಸಿವೆ. ಆರ್ಥಿಕ ಸದೃಢತೆ(ಕೃಷಿ, ಕೈಗಾರಿಕೆ, ಉದ್ಯೋಗ, ಸೇವಾ ಕ್ಷೇತ್ರ, ವಿಜ್ಞಾನ ಮತ್ತು ತಂತ್ರಜ್ಞಾನ ಸೇರಿದಂತೆ), ಮಹಿಳೆಯರ ಮೇಲಿನ ದೌರ್ಜನ್ಯ, ಆಡಳಿತ ಕ್ಷೇತ್ರವನ್ನುಕರಡು ನೀತಿಯಲ್ಲಿ ಆದ್ಯತಾ ವಲಯಗಳನ್ನು ಗುರುತಿಸಲಾಗಿದೆ.

ಸೂಕ್ತ ಸೂರು, ಮೂಲಸೌಕರ್ಯ, ಶುದ್ಧ ಕುಡಿಯುವ ನೀರು, ನೈರ್ಮಲ್ಯ, ಮಾಧ್ಯಮ ಮತ್ತು ಸಂಸ್ಕೃತಿ, ಕ್ರೀಡೆ ಮತ್ತು ಸಾಮಾಜಿಕ ಭದ್ರತೆಯ ಮೂಲಕ ಮಹಿಳೆಯರಿಗೆ ಅನುಕೂಲಕರ ವಾತಾವರಣ ನಿರ್ಮಾಣ ಮಾಡುವುದು ನೀತಿಯ ಉದ್ದೇಶವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT