ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಚಿಕಿತ್ಸೆ: ಪೋಲಿಯೊ ಲಸಿಕೆ ಪರೀಕ್ಷಿಸಬಹುದು

Last Updated 18 ಜೂನ್ 2020, 15:57 IST
ಅಕ್ಷರ ಗಾತ್ರ

ನವದೆಹಲಿ: ‘ಕೋವಿಡ್‌–19 ಚಿಕಿತ್ಸೆಯಲ್ಲಿ ಪೋಲಿಯೊ ಲಸಿಕೆಯನ್ನು ಪರೀಕ್ಷಿಸಬಹುದು, ಆದರೆ ಅದು ಸೋಂಕಿನಿಂದ ಸೀಮಿತ ರಕ್ಷಣೆಯನ್ನಷ್ಟೇ ನೀಡಬಹುದು’ ಎಂದು ಜಮ್ಮುವಿನಲ್ಲಿರುವ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಟಿಗ್ರೇಟಿವ್‌ ಮೆಡಿಸಿನ್‌ನ ನಿರ್ದೇಶಕ ರಾಮ್‌ ವಿಶ್ವಕರ್ಮ ಹೇಳಿದ್ದಾರೆ.

‘ಈ ಬಗ್ಗೆ ಕ್ಲಿನಿಕಲ್‌ ಪರೀಕ್ಷೆ ಅಗತ್ಯವಿದೆ’ ಎಂದೂ ಅವರು ಹೇಳಿದ್ದಾರೆ.

ಕೋವಿಡ್‌ಗೆ ಲಸಿಕೆ ಕಂಡು ಹಿಡಿಯಲು ಒಂದು ವರ್ಷ ಬೇಕಾಗಬಹುದು. ಇಂತಹ ಸಂದರ್ಭದಲ್ಲಿ ಭಾರತದಲ್ಲಿ ಮಕ್ಕಳಿಗೆ ನೀಡುವ ಪೋಲಿಯೊ ಲಸಿಕೆ ಮತ್ತು ಬಿಸಿಜಿ ಚುಚ್ಚುಮದ್ದನ್ನು ಚಿಕಿತ್ಸೆಯಲ್ಲಿ ಬಳಸಬಹುದು ಎಂದು ಅಮೆರಿಕದ ಮೇರಿಲ್ಯಾಂಡ್‌ ವಿಶ್ವವಿದ್ಯಾಲಯದ ಸಂಶೋಧಕರು ಈಚೆಗೆ ಸಲಹೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT