ಪೋಲಿಯೊ ಲಸಿಕೆ ವಿರೋಧಿಸಿ ದಾಳಿ: ಪೊಲೀಸ್‌ ಸಾವು

ಬುಧವಾರ, ಮೇ 22, 2019
32 °C

ಪೋಲಿಯೊ ಲಸಿಕೆ ವಿರೋಧಿಸಿ ದಾಳಿ: ಪೊಲೀಸ್‌ ಸಾವು

Published:
Updated:

ಪೆಶಾವರ: ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಪೊಲೀಸರೊಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ. 

ವಾಯವ್ಯ ಪಾಕಿಸ್ತಾನದಲ್ಲಿ ಪೋಲಿಯೊ ಕಾರ್ಯಕರ್ತರಿಗೆ ಭದ್ರತೆ ಒದಗಿಸಲು ಇವರನ್ನು ನಿಯೋಜಿಸಲಾಗಿತ್ತು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಇಮ್ರಾನ್‌ ಖಾನ್‌ ಮೃತಪಟ್ಟವರು. ದಾಳಿ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. 

ಪೋಲಿಯೊ ಲಸಿಕೆ ಹಾಕಿಸುವುದರಿಂದ ಸಂತಾನ ಶಕ್ತಿ ಕ್ಷೀಣಿಸುತ್ತದೆ ಎಂಬುದು ಉಗ್ರರ ಆರೋಪ. ಹೀಗಾಗಿ ಪೋಲಿಯೊ ಆಂದೋಲನವನ್ನು ವಿರೋಧಿಸುತ್ತಲೇ ಬಂದಿದ್ದಾರೆ. 

ಏಪ್ರಿಲ್‌ ಮೊದಲ ವಾರದಲ್ಲಿ ಪೋಲಿಯೊ ಆಂದೋಲನದ ಸದಸ್ಯನನ್ನು ಗುಂಡಿಕ್ಕಿ ಉಗ್ರರು ಹತ್ಯೆ ಮಾಡಿದ್ದರು. 2012ರಿಂದ ಇಲ್ಲಿಯವರೆಗೆ 68 ಮಂದಿ ಪೋಲಿಯೊ ಕಾರ್ಯಕರ್ತರನ್ನು ಉಗ್ರರು ಹತ್ಯೆ ಮಾಡಿದ್ದಾರೆ. 

ಅಫ್ಗಾನಿಸ್ತಾನ, ನೈಜೀರಿಯಾ ಮತ್ತು ಪಾಕಿಸ್ತಾನದಲ್ಲಿ ಪೋಲಿಯೊ ಪೀಡಿತರು ಅಧಿಕ ಸಂಖ್ಯೆಯಲ್ಲಿದ್ದಾರೆ.

ಈ ಹಿನ್ನೆಲೆಯಲ್ಲಿ ದೇಶದಾದ್ಯಂತ ಪೋಲಿಯೊ ಲಸಿಕೆ ಅಭಿಯಾನ ನಡೆಸಲಾಗುತ್ತಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !