ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ರಕರ್ತರಿಗೆ ನೀತಿ ಸಂಹಿತೆ ಅಗತ್ಯ: ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು

Last Updated 16 ನವೆಂಬರ್ 2019, 22:04 IST
ಅಕ್ಷರ ಗಾತ್ರ

ನವದೆಹಲಿ: ‘ರಾಜಕೀಯ ಪಕ್ಷಗಳು, ಉದ್ದಿಮೆದಾರರು ತಮ್ಮದೇ ಆದ ಪತ್ರಿಕೆಗಳನ್ನು ಮತ್ತು ಸುದ್ದಿ ವಾಹಿನಿಗಳನ್ನು ಪ್ರಾರಂಭಿಸುತ್ತಿದ್ದಾರೆ. ಈ ಮೂಲಕ ಪಟ್ಟಭದ್ರ ಹಿತಾಸಕ್ತಿಗಳನ್ನು ಉತ್ತೇಜಿಸುತ್ತಿದ್ದು, ಪತ್ರಿಕೋದ್ಯಮದ ಮೌಲ್ಯಗಳನ್ನೂ ರಾಜಿ ಮಾಡಿಕೊಳ್ಳುತ್ತಿದ್ದಾರೆ’ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹೇಳಿದರು.

ಪ್ರೆಸ್‌ ಕೌನ್ಸಿಲ್‌ ಆಫ್‌ ಇಂಡಿಯಾ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಮತ್ತು ರಾಷ್ಟ್ರೀಯ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು ‘ಮಾಧ್ಯಮ ಸಂಸ್ಥೆಗಳು ಪತ್ರಕರ್ತರಿಗೆ ನೀತಿ ಸಂಹಿತೆ ಜಾರಿಗೊಳಿಸಲು ಇದು ಸಕಾಲ’ ಎಂದರು.

‘ಕಾಸಿಗಾಗಿ ಸುದ್ದಿಗಿಂತ ಸುಳ್ಳನ್ನು ನಿಜವೆಂದು ಸೃಷ್ಟಿಸಿ ಬಿತ್ತರಿಸುವ ಸುದ್ದಿ ದೊಡ್ಡ ಬಿಕ್ಕಟ್ಟು ಸೃಷ್ಟಿಸುತ್ತವೆ’ ಎಂದು ಪ್ರಸಾರ ಖಾತೆ ಸಚಿವ ಪ್ರಕಾಶ್‌ ಜಾವಡೇಕರ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT