ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಧಿತರ ಬಿಡುಗಡೆಗೆ ಎಲ್ಲಾ ಪಕ್ಷಗಳು ಒಗ್ಗೂಡಲಿ: ಫಾರೂಕ್ ಅಬ್ದುಲ್ಲಾ

ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಸಲಹೆ
Last Updated 15 ಮಾರ್ಚ್ 2020, 17:00 IST
ಅಕ್ಷರ ಗಾತ್ರ

ಶ್ರೀನಗರ: ‘ಕೇಂದ್ರಾಡಳಿತ ಪ್ರದೇಶದಿಂದ ಹೊರಗೆ ಬಂಧಿತರಾಗಿರುವವರನ್ನು ಮಾನವೀಯ ದೃಷ್ಟಿಯ ಆಧಾರದಲ್ಲಿ ಬಿಡುಗಡೆ ಮಾಡಲು ಜಮ್ಮು ಮತ್ತು ಕಾಶ್ಮೀರದ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಬೇಕು’ ಎಂದು ನ್ಯಾಷನಲ್ ಕಾನ್ಫರೆನ್ಸ್‌ನ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಶುಕ್ರವಾರವಷ್ಟೇ (ಮಾರ್ಚ್ 13)ಬಂಧನದಿಂದ ಬಿಡುಗಡೆಯಾಗಿರುವ ಫಾರೂಕ್ ಅವರ ಮೊದಲ ಹೇಳಿಕೆ ಇದಾಗಿದ್ದು, ‘ಬಿಡುಗಡೆಯಾದ ಬಳಿಕ ಪ್ರಜ್ಞಾಪೂರ್ವಕವಾಗಿ ರಾಜಕೀಯ ಹೇಳಿಕೆಗಳನ್ನು ನೀಡುವುದನ್ನು ತಪ್ಪಿಸುತ್ತಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.

‘ರಾಜಕೀ ಯವು ನಮ್ಮನ್ನು ವಿಭಜನೆ ಮಾಡುವ ಮೊದಲು, ಜಮ್ಮು ಮತ್ತು ಕಾಶ್ಮೀರದ ಎಲ್ಲಾ ಪಕ್ಷದ ನಾಯಕರು ಒಟ್ಟಾಗಿ ಹೊರಗಿನ
ಕಾರಾಗೃಹಗಳಲ್ಲಿ ಬಂಧಿತರಾಗಿರುವ ರಾಜ್ಯದ ಜನರನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಬೇಕೆಂದು ನಾನು ಕೋರುತ್ತೇನೆ’ ಎಂದು ಅಬ್ದುಲ್ಲಾ ಅವರು
ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT