ಸೋಮವಾರ, ಜನವರಿ 20, 2020
26 °C

‘ರಾಜಕೀಯ ಪಕ್ಷಗಳಿಗೆ ದೇಣಿಗೆ ಹೆಸರು ಬಹಿರಂಗಕ್ಕೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿ ರಹಸ್ಯ ಕಾಪಾಡುವಂತೆ ಸೂಚಿಸುವ ವ್ಯಕ್ತಿಗಳು ಮತ್ತು ಸಂಸ್ಥೆಗಳ ಹೆಸರುಗಳನ್ನು ಬಹಿರಂಗಪಡಿಸುವಂತೆ ಕೇಂದ್ರೀಯ ಮಾಹಿತಿ ಆಯೋಗ (ಸಿಐಸಿ) ಆದೇಶಿಸಿದೆ.

ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ (ಆರ್‌ಟಿಐ) ಈ ಬಗ್ಗೆ ವ್ಯಕ್ತಿಯೊಬ್ಬರು ಕೇಳಿದ ವಿವರಗಳಿಗೆ ಅಪೂರ್ಣ ಮತ್ತು ಅಸಮರ್ಪಕ ಮಾಹಿತಿ ನೀಡಲಾಗಿದೆ ಎಂದು ಸಿಐಸಿ ಅಸಮಾಧಾನ ವ್ಯಕ್ತಪಡಿಸಿದೆ. ಇದಕ್ಕಾಗಿ, ಮಾಹಿತಿ ಆಯುಕ್ತ ಸುರೇಶ್‌ ಚಂದ್ರ ಅವರು, ಆರ್ಥಿಕ ವ್ಯವಹಾರಗಳು, ಹಣಕಾಸು ಇಲಾಖೆ ಮತ್ತು ಚುನಾವಣಾ ಆಯೋಗದ ಮುಖ್ಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಷೋಕಾಸ್‌ ನೋಟಿಸ್‌ ಜಾರಿಗೊಳಿಸಿದ್ದಾರೆ.

ಆರ್‌ಟಿಐ ಕಾರ್ಯಕರ್ತ ವೆಂಕಟೇಶ್‌ ನಾಯಕ್‌ ಅವರು ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿ ರಹಸ್ಯ ಕಾಪಾಡಿರುವವರ ಕುರಿತು ಮಾಹಿತಿ ಕೋರಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು