ಮಾಲೇಗಾಂವ್‌ ಸ್ಫೋಟ ಪ್ರಕರಣ: ಅನಾರೋಗ್ಯದ ಕಾರಣ ವಿಚಾರಣೆಗೆ ಗೈರಾದ ಪ್ರಜ್ಞಾ

ಮಂಗಳವಾರ, ಜೂನ್ 25, 2019
22 °C
ಅಧಿಕ ರಕ್ತದೊತ್ತಡ

ಮಾಲೇಗಾಂವ್‌ ಸ್ಫೋಟ ಪ್ರಕರಣ: ಅನಾರೋಗ್ಯದ ಕಾರಣ ವಿಚಾರಣೆಗೆ ಗೈರಾದ ಪ್ರಜ್ಞಾ

Published:
Updated:
Prajavani

ಭೋಪಾಲ್‌, ಮುಂಬೈ: 2008 ಮಾಲೇಗಾಂವ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಮುಂಬೈನ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅನಾರೋಗ್ಯದ ಕಾರಣ ನೀಡಿ ಗುರುವಾರ ಗೈರಾದರು.

ಆದರೆ, ಶುಕ್ರವಾರ(ಜೂನ್ 7)ಕಡ್ಡಾಯವಾಗಿ ವಿಚಾರಣೆಗೆ ಹಾಜರಾಗಲೇ ಬೇಕು. ಇಲ್ಲವಾದಲ್ಲಿ ಪರಿಣಾಮ ಎದುರಿಸಬೇಕಾದೀತು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ವಿ.ಎಸ್.ಪಡಾಲ್ಕರ್‌ ಪ್ರಜ್ಞಾ ಸಿಂಗ್‌ ಪರ ವಕೀಲರಿಗೆ ಸೂಚಿಸಿದ್ದಾರೆ. 

ಅಧಿಕ ರಕ್ತದೊತ್ತಡ ಕಾರಣ ಅವರಿಗೆ ಭೋಪಾಲ್‌ನಿಂದ ಮುಂಬೈಗೆ ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿಚಾರಣೆಯಿಂದ ವಿನಾಯಿತಿ ನೀಡುವಂತೆ ನ್ಯಾಯಾಲಯಕ್ಕೆ ಪ್ರಜ್ಞಾ  ಪರ ವಕೀಲರು ಅರ್ಜಿ ಸಲ್ಲಿಸಿದ್ದರು. 

ಸಂಸತ್ತಿಗೆ ಸಂಬಂಧಿಸಿದ ಕಾರ್ಯದ ಹಿನ್ನೆಲೆಯಲ್ಲಿ ಈ ವಾರ ಪೂರ್ತಿ ವಿಚಾರಣೆಯಿಂದ ವಿನಾಯಿತಿ ನೀಡುವಂತೆ  ಕಳೆದ ಸೋಮವಾರ ಪ್ರಜ್ಞಾ ಸಿಂಗ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 3

  Amused
 • 0

  Sad
 • 0

  Frustrated
 • 3

  Angry

Comments:

0 comments

Write the first review for this !