ಶುಕ್ರವಾರ, ಡಿಸೆಂಬರ್ 13, 2019
25 °C

ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಗೆ ಪ್ರಜ್ಞಾ ಠಾಕೂರ್‌ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಗೆ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ. 

2019ರ ಸಂಸತ್ ಚುನಾವಣೆಯಲ್ಲಿ ಭೋಪಾಲ್‌ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪ್ರಜ್ಞಾ ಸಿಂಗ್‌ ಠಾಕೂರ್‌ ಅವರು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್‌ ಅವರನ್ನು ಪರಾಭವಗೊಳಿಸಿದ್ದರು. ಮಾಲೆಗಾಂವ್‌ ಬಾಂಬ್‌ ಸ್ಪೋಟ ಪ್ರಕರಣದಲ್ಲಿ ಆರೋಪಿಯಾಗಿದ್ದ ಅವರು 2017 ರ ಏಪ್ರಿಲ್‌ನಲ್ಲಿ ಮುಂಬೈ ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದಾರೆ.

21 ಸದಸ್ಯರನ್ನು ಹೊಂದಿರುವ ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ನೇತೃತ್ವ ವಹಿಸಲಿದ್ದಾರೆ. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು